ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ 
ದೇಶ

ಈಗ NDA ಎಂದರೆ ನಿತೀಶ್-ನಾಯ್ಡು ಡಿಪೆಂಡೆಂಟ್ ಅಲಯನ್ಸ್: ಕಾಂಗ್ರೆಸ್

ದೆಹಲಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಒಂದು ಗಂಟೆ ಭಾಷಣದಲ್ಲಿ ಹಲವು ಬಾರಿ ಎನ್ ಡಿಎ ಅನ್ನು ಉಲ್ಲೇಖಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಒಂದು ಗಂಟೆ ಭಾಷಣದಲ್ಲಿ ಹಲವು ಬಾರಿ ಎನ್ ಡಿಎ ಅನ್ನು ಉಲ್ಲೇಖಿಸಿದ್ದಾರೆ. ಆದರೆ ಕಳೆದ 10 ವರ್ಷಗಳಲ್ಲಿ ಎನ್‌ಡಿಎಯನ್ನು ಒಂದು ಬಾರಿಯೂ ಉಲ್ಲೇಖಿಸಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಎನ್‌ಡಿಎಯನ್ನು ನಿತೀಶ್-ನಾಯ್ಡು ಡಿಪೆಂಡೆಂಟ್ ಮೈತ್ರಿಕೂಟ ಎಂದು ಟೀಕಿಸಿದ ಕಾಂಗ್ರೆಸ್, ಸಂಸತ್ ಸಂಕೀರ್ಣದಲ್ಲಿರುವ ರಾಷ್ಟ್ರೀಯ ಪ್ರತಿಮೆಗಳ "ತೆರವು" ಕುರಿತು ಮೋದಿ ಸರ್ಕಾರ ಜನರಿಗೆ ವಿವರಣೆಯನ್ನು ನೀಡಬೇಕಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.

ಮಹಾತ್ಮ ಗಾಂಧಿ, ಬಿ ಆರ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಸೇರಿದಂತೆ ಇತರರ ಪ್ರತಿಮೆಗಳನ್ನು ಸಂಸತ್ತಿನ ಆವರಣದಲ್ಲಿ ಸ್ಥಳಾಂತರಿಸಲಾಗಿದೆ. ಈ ಕ್ರಮವನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ ಮತ್ತು ಅವುಗಳನ್ನು ಅವರ ಪ್ರಾಮುಖ್ಯತೆಯ ಸ್ಥಳಗಳಿಂದ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಿದೆ.

"ಹತಾಶೆ"ಯಿಂದ ಮತ್ತು ಬಿಜೆಪಿಯು ಸ್ಪಷ್ಟ ಬಹುಮತವನ್ನು ಗಳಿಸದ ಕೋಪವನ್ನು ಹೊರಹಾಕುವ ಯತ್ನದಲ್ಲಿ ಸರ್ಕಾರ, ಈ ರಾಷ್ಟ್ರೀಯ ಐಕಾನ್‌ಗಳ ಪ್ರತಿಮೆಗಳನ್ನು "ತೆಗೆದುಹಾಕಿದೆ" ಎಂದು ಖೇರಾ ಆರೋಪಿಸಿದ್ದಾರೆ.

ಸಂಸತ್ತಿನ ಸಂಕೀರ್ಣದಲ್ಲಿ ಪಾರಂಪರಿಕ ಪ್ರತಿಮೆಗಳ ನಿರ್ವಹಣೆ ಮತ್ತು ಸಂಸತ್ತಿನ ಸಂಕೀರ್ಣದ ಅಭಿವೃದ್ಧಿಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಮತ್ತು ಸಂಸತ್ತಿನ ಸಂಕೀರ್ಣದಲ್ಲಿ ರಾಷ್ಟ್ರೀಯ ನಾಯಕರು ಮತ್ತು ಸಂಸದರ ಭಾವಚಿತ್ರಗಳು ಮತ್ತು ಪ್ರತಿಮೆಗಳನ್ನು ಸ್ಥಾಪಿಸುವ ಸಮಿತಿಯ ನಿರ್ಧಾರವಿಲ್ಲದೆ ಪ್ರತಿಮೆಗಳನ್ನು "ತೆರವುಗೊಳಿಸಲಾಗಿದೆ" ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್