ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

Modi Govt 3.0: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ!

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾದ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ NDA ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ವೇಳೆ ಹಂಗಾಮಿ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ.

ನರೇಂದ್ರ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು — TNIE
Vishwanath S
Updated On : 7 Jun 2024, 6:58 pm

ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾದ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ NDA ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ವೇಳೆ ಹಂಗಾಮಿ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ.

ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನರೇಂದ್ರ ಮೋದಿ ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ರಾಷ್ಟ್ರಪತಿ ಭೇಟಿಗೂ ಮುನ್ನ ಹಂಗಾಮಿ ಪ್ರಧಾನಿ ಮೋದಿ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.

Also Read

NDA ರಾಷ್ಟ್ರಕ್ಕೆ ಬದ್ಧವಾಗಿರುವ ಮೈತ್ರಿಕೂಟ; ಸರ್ವಾನುಮತದ ನಿರ್ಧಾರಗಳು, ಪರಸ್ಪರ ನಂಬಿಕೆ ಈ ಮೈತ್ರಿಯ ತಿರುಳು: ನರೇಂದ್ರ ಮೋದಿ

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಂದರ್ಭದಲ್ಲಿ ಹಂಗಾಮಿ ಪ್ರಧಾನಿ ಮೋದಿ ಬೆಂಬಲಿಗ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಪಡೆದುಕೊಂಡಿದ್ದು, 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಹೊಂದಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments