ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನಿಲುವಿನತ್ತ ಎಲ್ಲರ ಕಣ್ಣು ನೆಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ವಕ್ತಾರರು ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಮಾತನಾಡಿದ್ದಾರೆ.
ಇದೀಗ ನಿತೀಶ್ ಕುಮಾರ್ ಕೂಡ ಪ್ರಧಾನಿ ಮೋದಿ ಸಮ್ಮುಖದಲ್ಲಿ ಇದನ್ನು ಪುನರುಚ್ಚರಿಸಿದ್ದಾರೆ. ಎನ್‌ಡಿಎ ನಾಯಕನ ಆಯ್ಕೆ ಮಾಡಲು ನಡೆದ ಸಭೆಯಲ್ಲಿ ರಾಜನಾಥ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಕೂಡ ಈ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ.
ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರ ಹೆಸರನ್ನು ಅನುಮೋದಿಸಿದ ನಿತೀಶ್ ಕುಮಾರ್, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಯಾವುದೇ ಕೆಲಸ ಉಳಿದಿದ್ದರೂ ಪ್ರಧಾನಿ ಮೋದಿ ಪೂರ್ಣಗೊಳಿಸುತ್ತಾರೆ. ಬಿಹಾರದ ಉಳಿದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ವೇಳೆ ನಿತೀಶ್ ಕುಮಾರ್ ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಸ್ಪರ್ಧಿಸಿದರೆ ಅವರು ಸೋಲುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದರು. ಇದಕ್ಕೆ ಪ್ರಧಾನಿ ಮೋದಿ ಮುಗುಳ್ನಕ್ಕರು.
ಈ ಬಾರಿ ಸೋತಿರುವ ಎಲ್ಲ ಸ್ಥಾನಗಳನ್ನು ಎನ್‌ಡಿಎ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ದೇಶ ಮತ್ತು ಬಿಹಾರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಿತೀಶ್ ಕುಮಾರ್, ನಿಮ್ಮ (ಪಿಎಂ ಮೋದಿ) ಆಶಯದಂತೆ ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಭರವಸೆ ನೀಡಿದರು.
ಶೀಘ್ರ ಕಾಮಗಾರಿ ಆರಂಭಿಸುವಂತೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ ಅವರು, ನಿಮ್ಮ ಕೆಲಸವನ್ನು ಆದಷ್ಟು ಬೇಗ ಆರಂಭಿಸಿ ಎಂದು ಹೇಳಿದರು. ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ನಿತೀಶ್, ಭಾನುವಾರಕ್ಕೆ ದಿನ ನಿಗದಿಯಾಗಿದೆ ಆದರೆ ಇಂದು ಕೂಡ ಆಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳಿದರು. ನರೇಂದ್ರ ಮೋದಿ ಕಳೆದ 10 ವರ್ಷಗಳಿಂದ ಪ್ರಧಾನಿಯಾಗಿದ್ದು, ಮತ್ತೊಮ್ಮೆ ಪ್ರಧಾನಿಯಾಗಲಿರುವುದು ಸಂತಸದ ವಿಷಯ ಎಂದು ನಿತೀಶ್ ಕುಮಾರ್ ಹೇಳಿದರು.