ರಾಮೋಜಿ ರಾವ್  
ದೇಶ

Ramoji Rao: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೈದರಾಬಾದ್‌: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಬೆಳಗಿನ ಜಾವ 3:45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷವಾಗಿತ್ತು.

ಜೂನ್ 5ರಂದು ಹೃದಯ ಸಂಬಂಧಿ ಸಮಸ್ಯೆಯಿಂದ ಉಸಿರಾಟಕ್ಕೆ ತೀವ್ರ ತೊಂದರೆಯಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯ ನಂತರ ಹೃದಯ ಸ್ಟೆಂಟ್ ಹಾಕಲಾಯಿತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ನಸುಕಿನ ಜಾವ ನಿಧನರಾಗಿದ್ದಾರೆ.

ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ಭಾರತ ಮಾಧ್ಯಮ ಲೋಕದಲ್ಲಿ ದೂರದೃಷ್ಟಿ ಹೊಂದಿದ್ದ ರಾಮೋಜಿ ರಾವ್ ಅವರ ನಿಧನ ತೀವ್ರ ದುಃಖವನ್ನುಂಟುಮಾಡಿದೆ. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರ ಗಮನಾರ್ಹ ಪ್ರಯತ್ನಗಳ ಮೂಲಕ ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಯಲ್ಲಿ ಹೊಸ ಮಾನದಂಡಗಳನ್ನು ಸೃಷ್ಟಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಇನ್ನೂ ಹಲವು ಗಣ್ಯರು ರಾಮೋಜಿ ರಾವ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT