ಪ್ರಾತಿನಿಧಿಕ ಚಿತ್ರ 
ದೇಶ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 15ರಿಂದ ಆರಂಭ ಸಾಧ್ಯತೆ

ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ಮೂರನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ.

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 15ರ ಸುಮಾರಿಗೆ ಆರಂಭವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ಮೂರನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ಪ್ರಮಾಣ ವಚನ ಸ್ವೀಕಾರ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದ್ದು, ನಂತರ ನೂತನ ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮರುದಿನ, ರಾಷ್ಟ್ರಪತಿಗಳು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಔಪಚಾರಿಕವಾಗಿ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನ ಆರಂಭವಾಗುವ ದಿನಗಳ ಕುರಿತು ನೂತನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ. ಅಧಿವೇಶನದ ವೇಳೆ ಪ್ರಧಾನಿ ಮೋದಿ ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಉಭಯ ಸದನಗಳಿಗೆ ಪರಿಚಯಿಸಲಿದ್ದಾರೆ. ಜೂನ್ 22ಕ್ಕೆ ಅಧಿವೇಶನ ಮುಕ್ತಾಯವಾಗುವ ಸಾಧ್ಯತೆ ಇದೆ.

ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನರೇಂದ್ರ ಮೋದಿ ಅವರು ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದ ಬಳಿಕ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಸಚಿವ ಸಂಪುಟದ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 5 ರಂದು 17ನೇ ಲೋಕಸಭೆಯನ್ನು ವಿಸರ್ಜಿಸಿದರು.

ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮೋದಿ ಆಯ್ಕೆಯಾದ ಬಗ್ಗೆ ಪತ್ರವನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ನೀಡಿದ ನಂತರ ಮುರ್ಮು ಶುಕ್ರವಾರ ಮೋದಿ ಅವರನ್ನು ನಿಯೋಜಿತ ಪ್ರಧಾನಿಯನ್ನಾಗಿ ನೇಮಿಸಿದರು.

ಈಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ. 543 ಸದಸ್ಯರ ಸದನದಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೂ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಒಟ್ಟಾಗಿ 293 ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT