ಮುಂಬೈನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ: ಏಕಕಾಲದಲ್ಲಿ 2 ವಿಮಾನಗಳ ಲ್ಯಾಂಡಿಂಗ್, ಟೇಕಾಫ್
ಮುಂಬೈ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದ್ದು, ಎರಡು ವಿಮಾನಗಳು ಪರಸ್ಪರ ಢಿಕ್ಕಿಯಾಗುವುದು ತಪ್ಪಿದೆ.
ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದ್ದು, ಎರಡು ವಿಮಾನಗಳು ಪರಸ್ಪರ ಢಿಕ್ಕಿಯಾಗುವುದು ತಪ್ಪಿದೆ.
ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಏಕಕಾಲದಲ್ಲಿ 2 ವಿಮಾನಗಳ ಭೂಸ್ಪರ್ಶ, ಟೇಕಾಫ್ ಆಗಿದೆ. ಕೆಲವೇ ಮಿಲಿ ಸೆಕೆಂಡ್ ಗಳ ಅಂತರದಲ್ಲಿ ಎರಡೂ ವಿಮಾನಗಳ ಢಿಕ್ಕಿ ತಪ್ಪಿದೆ.
ಬೆಂಗಳೂರು: ಎಂಜಿನ್ ನಲ್ಲಿ ಬೆಂಕಿ, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ ಜೆಟ್ ಟೇಕಾಫ್ ಆಗುತ್ತಿದ್ದ ಅದೇ ರನ್ ವೇ ಮೇಲೆ ಇಂಡಿಗೋ ವಿಮಾನವೊಂದು ಭೂಸ್ಪರ್ಶ ಮಾಡಿದ್ದು, ಈ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಕೆಲವೇ ಸೆಕಂಡ್ ಗಳ ಅಂತರವಿದ್ದ ಕಾರಣ ಉಭಯ ವಿಮಾನಗಳಲ್ಲಿನ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಇನ್ನು ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಸಂಸ್ಥೆ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದೆ. ಅಂತೆಯೇ ಈ ವೇಳೆ ಕರ್ತವ್ಯದಲ್ಲಿದ್ದ ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ಪದಚ್ಯುತಗೊಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.