ಅಚ್ಯುತಾನಂದ 
ದೇಶ

ಸಕ್ರಿಯ ರಾಜಕೀಯಕ್ಕೆ ಬಿಜೆಡಿ ಹಿರಿಯ ನಾಯಕ ಅಚ್ಯುತಾನಂದ ನಿವೃತ್ತಿ ಘೋಷಣೆ

ಬಿಜೆಡಿ ಹಿರಿಯ ನಾಯಕ ಅಚ್ಯುತಾನಂದ ಸಾಮಂತ ಅವರು ಲೋಕಸಭೆ ಚುನಾವಣೆಯ ಸೋಲಿನ ನಂತರ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಭುವನೇಶ್ವರ: ಬಿಜೆಡಿ ಹಿರಿಯ ನಾಯಕ ಹಾಗೂ ಕಂಧಮಾಲ್‌ನ ಮಾಜಿ ಸಂಸದ ಅಚ್ಯುತಾನಂದ ಸಾಮಂತ ಅವರು ಲೋಕಸಭೆ ಚುನಾವಣೆಯ ಸೋಲಿನ ನಂತರ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಸಾಮಂತಾ ಅವರು ಶನಿವಾರ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಸಕ್ರಿಯೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ಇಚ್ಛೆ

ವ್ಯಕ್ತಪಡಿಸಿದ್ದರು. ಬಿಜೆಡಿ ಅಭ್ಯರ್ಥಿಯಾಗಿ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ ಪಟ್ನಾಯಕ್ ಅವರಿಗೆ ಸಾಮಂತಾ ಅವರು ಧನ್ಯವಾದ ತಿಳಿಸಿದ್ದಾರೆ.

ಬಿಜೆಡಿ ಮಾಜಿ ಸಂಸದ ಸಾಮಂತಾ ಅವರು, ಪ್ರೀತಿ ಮತ್ತು ಬೆಂಬಲ ನೀಡಿದ ತಮ್ಮ ಕ್ಷೇತ್ರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ತಮ್ಮ ನಿರ್ಧಾರ ಪ್ರಕಟಿಸಿದ ಸಾಮಂತಾ ಅವರು, ಕಳೆದ 32 ವರ್ಷಗಳಿಂದ ಮಾಡುತ್ತಿರುವ ಸಮಾಜಸೇವೆಯನ್ನು ಮುಂದುವರಿಸುವುದಾಗಿ ಮತ್ತು ಸಮಾಜ ಸೇವೆಗೆ ನನ್ನ ಬದ್ಧತೆ ಕೊನೆಯ ಉಸಿರು ಇರುವವರೆಗೂ ಮುಂದುವರಿಯುತ್ತದೆ ಎಂದು ಹೇಳಿದರು.

2024 ರ ಲೋಕಸಭಾ ಚುನಾವಣೆಯಲ್ಲಿ ಕಂಧಮಾಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಕಾಂತ ಪಾಣಿಗ್ರಾಹಿ ವಿರುದ್ಧ ಸಾಮಂತಾ ಅವರು 21,371 ಮತಗಳ ಅಂತರದಿಂದ ಸೋಲು ಅನುಭವಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT