ಕೇಂದ್ರ ಸಚಿವ ಸುರೇಶ್ ಗೋಪಿ 
ದೇಶ

ಅದು ಸುಳ್ಳು ಸುದ್ದಿ... ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸಚಿವ Suresh Gopi

ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ಟ್ವೀಟ್ ಮಾಡಿ, ''ನಾನು ಮೋದಿ ಸರಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಸಂಪೂರ್ಣ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ, ಕೇರಳದ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್, ದಕ್ಷಿಣ ರಾಜ್ಯದ ಪಕ್ಷದ ಘಟಕದಲ್ಲಿ ಸಿಬ್ಬಂದಿ ಬದಲಾವಣೆಯಾಗಲಿದೆ ಎಂಬ ವರದಿಗಳನ್ನೂ ಕೂಡ ಸುರೇಶ್ ಗೋಪಿ ತಳ್ಳಿಹಾಕಿದ್ದಾರೆ.

ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಅಥವಾ MoS (ಸ್ವತಂತ್ರ) ಉಸ್ತುವಾರಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ಹರಿದಾಡಿತ್ತು. ಆದರೆ ಅವರು ಇದು "ನಕಲಿ ಸುದ್ದಿ" ಎಂದು ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ