ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೋದಿ 3.0 ಸಂಪುಟದ 28 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ: ADR

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಇಪ್ಪತ್ತೆಂಟು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ.

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ
Lingaraj Badiger
Updated On : 11 Jun 2024, 8:56 pm

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಇಪ್ಪತ್ತೆಂಟು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಬುಧಾರ ಹೇಳಿದೆ.

ಮೋದಿ ನೂತನ ಸಂಪುಟದ 28 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದು, ಆ ಪೈಕಿ 19 ಸಚಿವರು ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ತಿಳಿಸಿದೆ.

ಅತ್ಯಂತ ಗಂಭೀರವಾಗ ಆರೋಪಗಳನ್ನು ಎದುರಿಸುತ್ತಿರುವ ಸಚಿವರ ಪೈಕಿ ಇಬ್ಬರು ಭಾರತೀಯ ದಂಡ ಸಂಹಿತೆ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶಾಂತನು ಠಾಕೂರ್ ಮತ್ತು ಶಿಕ್ಷಣ ಮತ್ತು ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಡಿಆರ್ ಹೇಳಿದೆ.

Advertisement

Advertisement

Also Read

ಲೋಕಸಭಾ ಚುನಾವಣೆ: ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್ ಗಳು- ADR ವಿಶ್ಲೇಷಣೆ

ಐವರು ಸಚಿವರು, ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್, ಠಾಕೂರ್, ಮಜುಂದಾರ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಸುರೇಶ್ ಗೋಪಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ವಿರುದ್ಧ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಿವೆ ಎಂದು ಎಡಿಆರ್ ವರದಿ ಮಾಡಿದೆ.

ಇನ್ನು ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಎಂಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಒಟ್ಟು 71 ಸಚಿವರಲ್ಲಿ 28 ಸಚಿವರು(ಶೇ. 39) ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments