ಗೌರವ್ ಗೊಗೊಯ್ 
ದೇಶ

ಮಣಿಪುರ ಕುರಿತು ಭಾಗ್ವತ್ ಸಲಹೆ ಬಗ್ಗೆ ಪ್ರಧಾನಿ ಮೋದಿ ಗಮನ ಹರಿಸುತ್ತಾರೆ ಎಂಬ ನಿರೀಕ್ಷೆಯಿಲ್ಲ: ಗೌರವ್ ಗೊಗೊಯ್

ಮಣಿಪುರ ಬಿಕ್ಕಟ್ಟನ್ನು ಆದ್ಯತೆಯ ಮೇಲೆ ಪರಿಹರಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದಾರೆ.

ಗುವಾಹಟಿ: ಮಣಿಪುರ ಬಿಕ್ಕಟ್ಟನ್ನು ಆದ್ಯತೆಯ ಮೇಲೆ ಪರಿಹರಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಅಸ್ಸಾಂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಗಮನ ಹರಿಸುತ್ತಾರೆ ಎಂದು ನಾನು ನಿರೀಕ್ಷಿಸುವುದಿಲ್ಲ. ಪ್ರಧಾನಿ ಮೋದಿ ಅವರು ಮಣಿಪುರ ಬಿಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಕಾನೂನು ಜಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ” ಎಂದು ಗೊಗೊಯ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಅದೃಷ್ಟವಶಾತ್, ಜನರು ಮಣಿಪುರದ ಪರವಾಗಿ ಮಾತನಾಡಲು ಮತ್ತು ಭಾರತೀಯ ಸಂಸತ್ತು ಮತ್ತು ಸಂವಿಧಾನವನ್ನು ರಕ್ಷಿಸಲು ಇಂಡಿಯಾ ಮೈತ್ರಿಕೂಟವನ್ನು ಆಯ್ಕೆ ಮಾಡಿದ್ದಾರೆ" ಎಂದು ಕಾಂಗ್ರೆಸ್ ನಾಯಕ ಬರೆದುಕೊಂಡಿದ್ದಾರೆ.

ಸೋಮವಾರ ನಾಗ್ಪುರದಲ್ಲಿ ನಡೆದ ಆರ್ ಎಸ್ಎಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ಮಣಿಪುರ ಶಾಂತಿಗಾಗಿ ಒಂದು ವರ್ಷದಿಂದ ಎದುರು ನೋಡುತ್ತಿದೆ. ಆದ್ಯತೆಯ ಮೇರೆಗೆ ಅಲ್ಲಿನ ಹಿಂಸಾಚಾರವನ್ನು ಕೊನೆಗಾಣಿಸಲು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದರು.

ಕಳೆದ 10 ವರ್ಷಗಳಿಂದ ಮಣಿಪುರ ಶಾಂತಿಯುತವಾಗಿತ್ತು. ಆದರೆ ಏಕಾಏಕಿ ಗನ್ ಸಂಸ್ಕೃತಿ ಮರಳಿ ಬಂದು ವಿಜೃಂಭಿಸಲು ಆರಂಭಿಸಿತು. ಚುನಾವಣೆಯ ಗುಂಗಿನಿಂದ ಹೊರಬಂದು ಈಗ ದೇಶ ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಭಾಗವತ್ ಸಲಹೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!