ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ  
ದೇಶ

ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು: ರಾಹುಲ್ ಗಾಂಧಿ

ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಲುತ್ತಿದ್ದರು...

ರಾಯ್ ಬರೇಲಿ: ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಅಥವಾ ಮೂರು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ರಾಯ್ ಬರೇಲಿಯಲ್ಲಿ ನಡೆದ ಕೃತಜ್ಞತಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಲ ಕಡಿಮೆ ಮಾಡಲು ಇಂಡಿಯಾ ಬಣದ ಪಕ್ಷಗಳು ರಾಯ್‌ಬರೇಲಿ, ಅಮೇಥಿ ಮತ್ತು ದೇಶದ ಇತರ ಭಾಗಗಳಲ್ಲಿ ಒಗ್ಗಟ್ಟಿನಿಂದ ಹೋರಾಡಿದವು ಎಂದರು.

ತಾವು ಮತ್ತು ಇತರ ಪಕ್ಷದ ಸಂಸದರು ಚುನಾವಣಾ ಫಲಿತಾಂಶದ ಬಗ್ಗೆ "ಅಹಂಕಾರಕ್ಕೆ ಬಲಿಯಾಗುವುದಿಲ್ಲ" ಮತ್ತು ಜನಸಾಮಾನ್ಯರ ಪರವಾಗಿ ಕೆಲಸ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದರು.

ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಮೋದಿ ಅವರು ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ ಮತ್ತು ಉನ್ನತ ಕೈಗಾರಿಕೋದ್ಯಮಿಗಳು ಹಾಗೂ ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಜನಸಾಮಾನ್ಯರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು, ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗಾಗಿ ಜನರಿಗೆ ಧನ್ಯವಾದ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!