ಆತ್ಮಹತ್ಯೆ online desk
ದೇಶ

ಪತಿ Instagram ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ!

ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾ: ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸದರ್‌ಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರ್‌ಪುರ ಕಾಲೋನಿ ನಿವಾಸಿಯಾಗಿರುವ ಮಹಿಳೆ ಅತಿಯಾಗಿ ಇನ್‌ಸ್ಟಾಗ್ರಾಮ್ ಬಳಕೆ ಮಾಡುತ್ತಿದ್ದರು. Instagram ಅತಿಯಾಗಿ ಅಡಿಕ್ಟ್ ಆಗಿದ್ದರಿಂದ ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ಕೂಡ ನಡೆಯುತ್ತಿತ್ತು.

ಸೋಮವಾರ ಈ ಜಗಳ ತಾರಕಕ್ಕೇರಿ ಪತಿ Instagram ಬಳಕೆ ಮಾಡದಂತೆ ಸೂಚಿಸಿದ್ದರಿಂದ ಮನನೊಂದ ಮಹಿಳೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕಾಗಮಿಸಿ ಸ್ಥಳವನ್ನು ಪರಿಶೀಲಿಸಿದೆ. ದಂಪತಿಗೆ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್