ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಜವಾನನಿಗೆ ಸೇನೆಯಿಂದ ಅಂತಿಮ ಗೌರವ  
ದೇಶ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಎನ್ ಕೌಂಟರ್: ಮತ್ತೊಬ್ಬ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಡಗಿದ್ದ ಮತ್ತೊಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಡಗಿದ್ದ ಮತ್ತೊಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಛತ್ರಗಲಾ ಪ್ರದೇಶದಲ್ಲಿ ನಿನ್ನೆ ರಾತ್ರಿ ಭದ್ರತಾ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿದ ನಂತರ ಉಗ್ರರು ಮತ್ತು ಯೋಧನ ನಡುವೆ ಗುಂಡಿನ ಚಕಮಕಿ ನಡೆದವು ಎಂದು ಪೊಲೀಸರು ತಿಳಿಸಿದ್ದಾರೆ.

ದೋಡಾ ಜಿಲ್ಲೆಯ ಭದರ್ವಾಹ್-ಪಠಾಣ್‌ಕೋಟ್ ರಸ್ತೆಯಲ್ಲಿರುವ ಚತ್ತರ್‌ಗಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸ್ ಮತ್ತು ರಾಷ್ಟ್ರೀಯ ರೈಫಲ್ಸ್‌ ಚೆಕ್‌ಪೋಸ್ಟ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಪ್ರಾರಂಭವಾದ ಎನ್‌ಕೌಂಟರ್‌ನಲ್ಲಿ ಐವರು ಜವಾನರು ಮತ್ತು ಉಪವಿಭಾಗೀಯ ವಿಶೇಷ ಪೊಲೀಸ್ ಅಧಿಕಾರಿ (SDPO) ಗಾಯಗೊಂಡಿದ್ದಾರೆ.

ಕಥುವಾ ಜಿಲ್ಲೆಯ ಹೀರಾನಗರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ರಿಯಾಸಿಯಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಯಾತ್ರಿಕರು ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.

ನಿನ್ನೆ ಮಂಗಳವಾರ ಸಾಯಂಕಾಲ ಕಥುವಾದ ಹಿರಾನಗರ ಗ್ರಾಮದ ಸೈದಾ ಸುಖಲ್ ಗ್ರಾಮದ ಮನೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಜವಾನ ಹುತಾತ್ಮರಾಗಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇನ್ನೊಬ್ಬ ಉಗ್ರ ತಪ್ಪಿಸಿಕೊಂಡಿದ್ದು ಅವನಿಗಾಗಿ ಹುಡುಕಾಟ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ