ರಾಹುಲ್ ಗಾಂಧಿ 
ದೇಶ

ಎನ್‌ಡಿಎ ಸರ್ಕಾರ 'ಕುಂಟುತ್ತಿದೆ'; ವಿಪಕ್ಷಗಳಿಂದ ಬಿಜೆಪಿಗೆ ತೀವ್ರ ಹೊಡೆತ: ರಾಹುಲ್ ಗಾಂಧಿ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಕೇಸರಿ ಪಕ್ಷಕ್ಕೆ ತೀವ್ರ ಹೊಡೆತ ನೀಡಿದ್ದರಿಂದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ "ಕುಂಟುತ್ತಿದೆ".

ವಯನಾಡ್: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಕೇಸರಿ ಪಕ್ಷಕ್ಕೆ ತೀವ್ರ ಹೊಡೆತ ನೀಡಿದ್ದರಿಂದ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ "ಕುಂಟುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ದೇಶದ ಜನರು ಬಿಜೆಪಿ ಮತ್ತು ನರೇಂದ್ರ ಮೋದಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಆದ್ದರಿಂದ ಪ್ರಧಾನಿ ಈಗ ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ಗಾಂಧಿ ಸಲಹೆ ನೀಡಿದರು.

ಇಂದು ಕೇರಳದ ವಯನಾಡು ಜಿಲ್ಲೆಯ ಕಲ್ಪೆಟ್ಟಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಸತ್ಯವೇನೆಂದರೆ, ಇಂದು ನಮ್ಮದು(ಕೇಂದ್ರದಲ್ಲಿ) ಅಂಗವಿಕಲ ಸರ್ಕಾರವಾಗಿದೆ. ಇಂಡಿಯಾ ಬಣದ ಮಾರಕ ಹೊಡೆತದಿಂದ ಅದಕ್ಕೆ ನೇರವಾಗಿ ನಡೆಯಲು ಸಾಧ್ಯವಾಗುತ್ತಿಲ್ಲ. ಇದು ಖಂಡಿತವಾಗಿಯೂ ದೇಶವನ್ನು ಮುನ್ನಡೆಸುವ ಸಾಮರ್ಥ್ಯವಿರುವ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.

ವಯನಾಡ್ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಭಾರಿ ಅಂತರದಿಂದ ಗೆದ್ದ ನಂತರ ಇಂದು ಮೊದಲ ಬಾರಿಗೆ ದೇವರ ನಾಡಿಗೆ ರಾಹುಲ್ ಗಾಂಧಿ ಆಗಮಿಸಿದ್ದರು. ಇಂಡಿ ಬಣ "ನರೇಂದ್ರ ಮೋದಿ ಮಾದರಿಯನ್ನು ಸಂಪೂರ್ಣವಾಗಿ ನಾಶಪಡಿಸಿದೆ" ಎಂದು ಹೇಳಿದರು.

ಇಂದು ನೀವು ನೋಡುತ್ತಿರುವ ನರೇಂದ್ರ ಮೋದಿಯವರು ಚುನಾವಣಾ ಪೂರ್ವದಲ್ಲಿ ನೋಡಿದ್ದಕ್ಕಿಂತ ಸಂಪೂರ್ಣ ಭಿನ್ನವಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ