ಪ್ರಾತಿನಿಧಿಕ ಚಿತ್ರ 
ದೇಶ

ಮಹಾರಾಷ್ಟ್ರ: 9 ವರ್ಷದ ಮಗನ ಬಾಯಿಗೆ ಕಾಗದದ ಉಂಡೆ ತುರುಕಿ ಉಸಿರುಗಟ್ಟಿಸಿ ಕೊಲೆ, ತಂದೆಯ ಬಂಧನ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಉಸಿರುಗಟ್ಟಿಸಿ ಕೊಂದ ಆರೋಪದ ಮೇಲೆ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತನ್ನ ಒಂಬತ್ತು ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಉಸಿರುಗಟ್ಟಿಸಿ ಕೊಂದ ಆರೋಪದ ಮೇಲೆ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಘಟನೆ ನಡೆದ ಸೋಮವಾರ-ಮಂಗಳವಾರದ ಮಧ್ಯರಾತ್ರಿ ಸಮಯದಲ್ಲಿ ಆರೋಪಿಯು ಮದ್ಯಪಾನ ಮಾಡಿದ್ದನು. ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ಮತ್ತು ಆತನ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಬಾಲಕ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ತಾಯಿ ಮನೆಯಿಂದ ಬಾಲಕ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದ್ದರು. ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಬಾಲಕ ತನ್ನ ತಂದೆಯ ಮನೆಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಬಾಲಕನ ಬಾಯಿಯಲ್ಲಿ ಕಾಗದದ ಚೆಂಡು ಪತ್ತೆಯಾಗಿದೆ ಮತ್ತು ಆತನ ಮೂಗಿನಿಂದ ರಕ್ತ ಸೋರುತ್ತಿರುವುದು ಕಂಡುಬಂದಿದೆ.

ಪತ್ನಿ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದ ನಂತರ ವ್ಯಕ್ತಿ ಅತಿಯಾದ ಮದ್ಯಪಾನ ಮಾಡುತ್ತಿದ್ದನು ಎಂದು ತನಿಖೆ ಸೂಚಿಸಿದೆ. ಆತ ಸೋಮವಾರ-ಮಂಗಳವಾರ ಮಧ್ಯರಾತ್ರಿ ಮದ್ಯ ಸೇವಿಸಿ, ನೋಟ್‌ಬುಕ್‌ನಿಂದ ಹರಿದ ಪೇಪರ್‌ಗಳಿಂದ ತಯಾರಿಸಿದ ಚೆಂಡನ್ನು ಬಾಲಕನ ಬಾಯಿಗೆ ತುರುಕಿ, ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಾಲಕನ ಸಂಬಂಧಿಯೊಬ್ಬರು ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಆರೋಪಿಯನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!