ಸುಪ್ರೀಂ ಕೋರ್ಟ್  
ದೇಶ

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ

ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನವದೆಹಲಿ: ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಗ್ರೇಸ್ ಅಂಕ ನೀಡಲಾದ 1,563 ವಿದ್ಯಾರ್ಥಿಗಳಿಗೆ ಜೂನ್ 23 ರಂದು ಮರು-ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿಗಳಿಗೆ ಅವರ ನಿಜವಾದ ಅಂಕಗಳನ್ನು (ಗ್ರೇಸ್ ಅಂಕಗಳಿಲ್ಲದೆ) ತಿಳಿಸಲಾಗುತ್ತದೆ. ಮರು ಪರೀಕ್ಷೆಗೆ ಹಾಜರಾಗಲು ಅವರಿಗೆ ಆಯ್ಕೆಯನ್ನು ನೀಡಲಾಗುವುದು.

ಮರು ಪರೀಕ್ಷೆಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳ ಫಲಿತಾಂಶಗಳು ಮೇ 5 ರಂದು ನಡೆದ ಪರೀಕ್ಷೆಗಳ ಅಂಕಗಳನ್ನು ಆಧರಿಸಿದೆ. NEET-UG 2024 ರ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದಿರುವ ತನ್ನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ.

ಕೌನ್ಸೆಲಿಂಗ್ ನಿಗದಿತವಾಗಿ ಮುಂದುವರಿಯುತ್ತದೆ, ಯಾವುದೇ ಅಡ್ಡಿಯಾಗುವುದಿಲ್ಲ. ಪರೀಕ್ಷೆ ಮುಂದುವರಿದರೆ, ಉಳಿದವು ನಿಗದಿತ ಪ್ರಕಾರ ಅದಕ್ಕೆ ಸರಿಯಾಗಿ ನಡೆಯುತ್ತದೆ. ಆದ್ದರಿಂದ ಇಲ್ಲಿ ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರವು ಈ ಸಮಸ್ಯೆಯನ್ನು ಪರಿಹರಿಸಲು ತೆಗೆದುಕೊಂಡ ಕ್ರಮಗಳನ್ನು ವಿವರಿಸಿದೆ.ಆರೋಪಗಳ ತನಿಖೆಗಾಗಿ ಜೂನ್ 10, 11 ಮತ್ತು 12 ರಂದು ಸಮಿತಿಯ ಸಭೆ ನಡೆಸಲಾಯಿತು, ಸಮಿತಿಯ ಶಿಫಾರಸುಗಳನ್ನು ಆಧರಿಸಿ, ಸಂತ್ರಸ್ತ ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲಾಗುವುದು. ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದರು.

ನೀಟ್ ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ NEET-UG, 2024 ರದ್ದತಿ ಸೇರಿದಂತೆ ಎಲ್ಲಾ ಅರ್ಜಿಗಳನ್ನು ಜುಲೈ 8 ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶಿಕ್ಷಣ ಸಚಿವರ ಪ್ರತಿಕ್ರಿಯೆ: NEET-UG 2024 ಪರೀಕ್ಷೆಯ ಕುರಿತು ಸುಪ್ರೀಂ ಕೋರ್ಟ್‌ನ ವಿಚಾರಣೆಯ ಕುರಿತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, "ಕೇಂದ್ರ ಸರ್ಕಾರ ಮತ್ತು NTA ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಬದ್ಧವಾಗಿದೆ ಎಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. 24 ಲಕ್ಷ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. NEET ಪರೀಕ್ಷೆಯಲ್ಲಿ ಯಾವುದೇ ಪೇಪರ್ ಸೋರಿಕೆಯಾಗಿರುವ ಬಗ್ಗೆ ಪುರಾವೆ ಇನ್ನೂ ಕಂಡುಬಂದಿಲ್ಲ, ಸುಮಾರು 1,560 ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಶಿಫಾರಸು ಮಾಡಲಾದ ಮಾದರಿಯನ್ನು ಅಳವಡಿಸಿಕೊಳ್ಳಲಾಗಿದೆ. ಅದಕ್ಕಾಗಿ ಶಿಕ್ಷಣತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT