ಲೋಕಸಭೆ 
ದೇಶ

ಜೂನ್ 26ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಜೂ.25ರ ಮಧ್ಯಾಹ್ನದವರೆಗೂ ಬೆಂಬಲ ಪತ್ರ ಸಲ್ಲಿಸಲು ಅವಕಾಶ

ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆಯು ಜೂನ್ 26 ರಂದು ನಡೆಯಲಿದ್ದು, ಅಭ್ಯರ್ಥಿಯನ್ನು ಬೆಂಬಲಿಸುವ ಪತ್ರವನ್ನು ಸಂಸದರು ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 25ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು.

ನವದೆಹಲಿ: 18ನೇ ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆಯು ಜೂನ್ 26 ರಂದು ನಡೆಯಲಿದ್ದು, ಅಭ್ಯರ್ಥಿಯನ್ನು ಬೆಂಬಲಿಸುವ ಪತ್ರವನ್ನು ಸಂಸದರು ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 25ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಗುರುವಾರ ತಿಳಿಸಿದೆ.

18ನೇ ಲೋಕಸಭೆಯು ಜೂನ್ 24 ರಂದು ಮೊದಲ ಬಾರಿಗೆ ಸಭೆ ಸೇರಲಿದ್ದು, ಜುಲೈ 3 ರಂದು ಅಧಿವೇಶನ ಮುಕ್ತಾಯವಾಗಲಿದೆ.

ಲೋಕಸಭೆ ಸ್ಪೀಕರ್ ಚುನಾವಣೆಗೆ ನಿಗದಿಪಡಿಸಿದ ದಿನಾಂಕದ ಹಿಂದಿನ ದಿನದಂದು ಮಧ್ಯಾಹ್ನ 12 ಗಂಟೆಯವರೆಗೆ ಯಾವುದೇ ಸಮಯದಲ್ಲಿ, ಯಾವುದೇ ಸದಸ್ಯರು ಸ್ಪೀಕರ್ ಕಚೇರಿಗೆ ಇನ್ನೊಬ್ಬ ಸದಸ್ಯರನ್ನು ಬೆಂಬಲಿಸುವ ಪತ್ರವನ್ನು ಮಹಾಲೇಖಪಾಲರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ.

ಜೂನ್ 24 ಮತ್ತು ಜೂನ್ 25 ರಂದು ನೂತನ ಸಂಸದರ ಪ್ರಮಾಣ ವಚನ ಸ್ವೀಕಾರಕ್ಕೆ ನಡೆಯಲಿದೆ. ಜೂನ್ 26ಕ್ಕೆ ಸ್ಪೀಕರ್ ಆಯ್ಕೆ ನಡೆಯಲಿದೆ.

ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್