ಧರ್ಮೇಂದ್ರ ಪ್ರಧಾನ್ 
ದೇಶ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷ್ಯಗಳಿಲ್ಲ: NEET-UG ಫಲಿತಾಂಶದ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕ್ಷ್ಯಗಳಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ 1,563 ನೀಟ್-ಯುಜಿ 2024 ಅಭ್ಯರ್ಥಿಗಳಿಗೆ ಕೃಪಾಂಕಗಳನ್ನು ನೀಡುವ ನಿರ್ಧಾರವನ್ನು ಹಿಂಪಡೆಯಲಾಗಿದೆ ಮತ್ತು ಈ ವಿದ್ಯಾರ್ಥಿಗಳು ಜೂನ್ 23 ರಂದು ಮರು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಬೆನ್ನಲ್ಲೇ ಪ್ರಧಾನ್ ಈ ಹೇಳಿಕೆ ನೀಡಿದ್ದಾರೆ. ಆದರೆ, ಸುಪ್ರೀಂ ಕೋರ್ಟ್, ಪ್ರವೇಶಾತಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಿಲ್ಲ.

ಎನ್ ಟಿಎ ನಲ್ಲಿ ಕಾರ್ಯಕ್ಷಮತೆಯ ಕೊರತೆ ಹಾಗೂ ಭ್ರಷ್ಟಾಚಾರ ನಡೆದಿರುವುದನ್ನು ತಳ್ಳಿಹಾಕಿರುವ ಧರ್ಮೇಂದ್ರ ಪ್ರಧಾನ್, ''ನೀಟ್-ಯುಜಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಎನ್ ಟಿಎಯಲ್ಲಿನ ಭ್ರಷ್ಟಾಚಾರದ ಆರೋಪಗಳು ಆಧಾರರಹಿತವಾಗಿವೆ; ಇದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಯಾವುದೇ ಅದಕ್ಷತೆ ಇಲ್ಲ ಎಂದು ಹೇಳಿದ್ದಾರೆ.

“ಎನ್‌ಟಿಎ ದೇಶದಲ್ಲಿ ಎನ್ಇಇಟಿ, ಜೆಇಇ ಮತ್ತು ಸಿಯುಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುತ್ತದೆ. ಆದರೆ ಈಗ ನಡೆದಿರುವ ಲೋಪಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವಿದ್ಯಾರ್ಥಿಗೆ ಅನಾನುಕೂಲವಾಗದಿರುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ, ”ಎಂದು ಪ್ರಧಾನ್ ಹೇಳಿದ್ದಾರೆ.

ಎನ್ಇಇಟಿ ಪರೀಕ್ಷೆಗೆ ಸಂಬಂಧಿಸಿದಂತೆ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ಸಮಸ್ಯೆ ಸುಮಾರು 1,500 ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ. ನ್ಯಾಯಾಲಯಕ್ಕೆ ಉತ್ತರ ನೀಡಲು ಸರಕಾರ ಸಿದ್ಧವಿದೆ,’’ ಎಂದು ಪ್ರಧಾನ್ ಹೇಳಿದ್ದಾರೆ.

“ಕೆಲವು ದೊಡ್ಡ ಪ್ರಶ್ನೆಗಳನ್ನು ಎತ್ತಲಾಗಿದೆ; ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಸಿದ್ಧವಿದೆ. ನಿರ್ದಿಷ್ಟ ಘಟನೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇದಕ್ಕೆ ಕಾರಣರಾದವರಿಗೆ ಖಂಡಿತ ಶಿಕ್ಷೆಯಾಗುತ್ತದೆ. ಎಲ್ಲಾ ಪಾರದರ್ಶಕತೆಯೊಂದಿಗೆ ವಿದ್ಯಾರ್ಥಿಗಳಿಗೆ ನ್ಯಾಯವನ್ನು ನೀಡಲು ಭಾರತ ಸರ್ಕಾರ ಮತ್ತು ಎನ್‌ಟಿಎ ಬದ್ಧವಾಗಿದೆ ಎಂದು ನಾನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆ ನೀಡುತ್ತೇನೆ. ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ 1500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೀಡಿರುವ ಗ್ರೇಸ್ ಮಾರ್ಕ್ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. "1,563 ಅಭ್ಯರ್ಥಿಗಳಲ್ಲಿ, ಮರು-ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸದಿದ್ದರೆ, ಅವರ ಹಿಂದಿನ ಅಂಕಗಳು, ಗ್ರೇಸ್ ಅಂಕಗಳನ್ನು ಹೊರತುಪಡಿಸಿ, ಫಲಿತಾಂಶದ ಉದ್ದೇಶಗಳಿಗಾಗಿ ನೀಡಲಾಗುತ್ತದೆ" ಎಂದು ಅವರು ಹೇಳಿದ್ದಾರೆ.

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು ಮತ್ತು ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಂದು ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT