ಪ್ರಧಾನಿ ಮೋದಿ 
ದೇಶ

ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸಶಸ್ತ್ರ ಪಡೆಗಳ ಸಂಪೂರ್ಣ ಶಕ್ತಿ ಬಳಸುವಂತೆ ಪ್ರಧಾನಿ ಮೋದಿ ಆದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸಶಸ್ತ್ರ ಪಡೆಗಳ ಸಂಪೂರ್ಣಸಾಮರ್ಥ್ಯವನ್ನು ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೇನೆಯ ಅಧಿಕಾರಿಗಳು ಸೂಚಿಸಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸಶಸ್ತ್ರ ಪಡೆಗಳ ಸಂಪೂರ್ಣಸಾಮರ್ಥ್ಯವನ್ನು ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾರತೀಯ ಸೇನೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರ ದಾಳಿ ಸೇರಿದಂತೆ ಕಣಿವೆಯಲ್ಲಿ ಸರಣಿ ಭಯೋತ್ಪಾದಕ ದಾಳಿಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಧಾನಿಗೆ ನೀಡಲಾಯಿತು. ಭಯೋತ್ಪಾದನೆ ನಿಗ್ರಹ ಕ್ರಮಗಳನ್ನು ಕೈಗೊಳ್ಳುತ್ತಿರುವ ಬಗ್ಗೆಯೂ ಪ್ರಧಾನಿ ಮೋದಿಗೆ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಭಾರತದ ಸಶಸ್ತ್ರ ಪಡೆಗಳ ಸಂಪೂರ್ಣ ಸಾಮರ್ಥ್ಯವನ್ನು ಭಯೋತ್ಪಾದನಾ ನಿಗ್ರಹಕ್ಕೆ ನಿಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಪ್ರಧಾನಿ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಭದ್ರತಾ ಪಡೆಗಳ ನಿಯೋಜನೆ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೂ ಮಾತನಾಡಿದ್ದು, ಸ್ಥಳೀಯ ಆಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಅವರು, ವಿದೇಶಿ ಭಯೋತ್ಪಾದಕರಿಗೆ ಸಹಾಯ ಮಾಡುವ ಸ್ಥಳೀಯ ಏಜೆಂಟರಿಗೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಠಿಣ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT