ಪ್ರಾತಿನಿಧಿಕ ಚಿತ್ರ 
ದೇಶ

ಜಾರ್ಖಂಡ್‌; ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಮೂವರು ಸಾವು

ಜಮ್‌ಶೆಡ್‌ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಜಮ್‌ಶೆಡ್‌ಪುರ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ರೈಲು ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಎಳೆ ಮಕ್ಕಳು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್‌ಶೆಡ್‌ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮೂವರು ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗಿದೆ.

ಮೂವರು ಪ್ರಾಯಶಃ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಪೊಟ್ಕಾ ಬ್ಲಾಕ್‌ನ ನಿವಾಸಿಗಳಾಗಿದ್ದು, ಅವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಗೋವಿಂದಪುರ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.

ಗೋವಿಂದಪುರ ಹಾಲ್ಟ್ ರೈಲು ನಿಲ್ದಾಣವು ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಅಡಿಯಲ್ಲಿ ಬರುತ್ತದೆ. ಮೃತದೇಹಗಳನ್ನು ಇಲ್ಲಿನ ಎಂಜಿಎಂ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT