ಅರವಿಂದ ಕೇಜ್ರಿವಾಲ್‌ 
ದೇಶ

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಜೂನ್ 19ಕ್ಕೆ ಮುಂದೂಡಿಕೆ

ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಜೂನ್ 19ಕ್ಕೆ ನಿಗದಿಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಇ.ಡಿ ಕಾಲಾವಕಾಶ ಕೋರಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಕುಮಾರ್ ಪ್ರಕರಣವನ್ನು ಮುಂದೂಡಿದರು.

ನವದೆಹಲಿ: ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಜೂನ್ 19ಕ್ಕೆ ನಿಗದಿಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ಇ.ಡಿ ಕಾಲಾವಕಾಶ ಕೋರಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಕುಮಾರ್ ಪ್ರಕರಣವನ್ನು ಮುಂದೂಡಿದರು.

ಈಮಧ್ಯೆ, ತಮ್ಮ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಮೌಲ್ಯಮಾಪನಕ್ಕಾಗಿ ಸ್ಥಾಪಿಸಲಾದ ವೈದ್ಯಕೀಯ ಮಂಡಳಿಯ ಸಭೆಗಳಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ತಮ್ಮ ಪತ್ನಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ನ್ಯಾಯಾಧೀಶರು ಶನಿವಾರ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದರು.

'ಆರೋಪಿಯು ತನ್ನ ಪತ್ನಿಯು ವೈದ್ಯಕೀಯ ಮಂಡಳಿಯ ಸಭೆಗಳಳ್ಲಿ ಭಾಗವಹಿಸಲು ಅವಕಾಶ ಕೋರಿ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಆದೇಶವನ್ನು ಹೊರಡಿಸುವ ಮೊದಲು ಸಂಬಂಧಪಟ್ಟ ಜೈಲು ಅಧೀಕ್ಷಕರಿಂದ ಪ್ರತಿಕ್ರಿಯೆ ಕೇಳುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಅರ್ಜಿಯನ್ನು ನಾಳೆಗೆ ವಿಚಾರಣೆ ನಡೆಸಲಾಗುವುದು' ಎಂದು ನ್ಯಾಯಾಧೀಶರು ತಿಳಿಸಿದರು.

ವಿಚಾರಣೆಯ ಸಂದರ್ಭದಲ್ಲಿ, ಜೂನ್ 25ಕ್ಕೆ ಪ್ರಕರಣವನ್ನು ಮುಂದೂಡುವಂತೆ ಇ.ಡಿ ನ್ಯಾಯಾಲಯಕ್ಕೆ ಮನವಿ ಮಾಡಿತು. ಆದರೆ, ಮುಂದಿನ ವಿಚಾರಣೆಯ ದಿನಾಂಕ ನಿಗಧಿಪಡಿಸುವಲ್ಲಿ ಆರೋಪಿಯ ಅನುಕೂಲವನ್ನು ಪರಿಗಣಿಸಲಾಗುವುದು ಹೊರತು, ತನಿಖಾ ಸಂಸ್ಥೆಯನ್ನಲ್ಲ ಎಂದು ನ್ಯಾಯಾಧೀಶರು ಹೇಳಿದರು.

'ಆರೋಪಿಯು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ನಿಮ್ಮ (ಇ.ಡಿ) ಕಸ್ಟಡಿಯಲ್ಲಿಲ್ಲ. ಅವರು ಸ್ವಲ್ಪ ಅನುಕೂಲವನ್ನು ಬಯಸಿದರೆ, ಅದರಲ್ಲಿ ನಿಮ್ಮ ಯಾವುದೇ ಪಾತ್ರವಿರುವುದಿಲ್ಲ. ನೀವು ಯಾವುದೇ ಪಾತ್ರವನ್ನು ವಹಿಸುವಂತಿಲ್ಲ. ಹೀಗಾಗಿ, ನ್ಯಾಯಾಂಗ ಬಂಧನದಲ್ಲಿರುವ ಅವರ ಅನುಕೂಲವನ್ನು ನಾನು ಪರಿಗಣಿಸುತ್ತೇನೆ. ನಿಮ್ಮದಲ್ಲ' ಎಂದು ನ್ಯಾಯಾಧೀಶರು ಹೇಳಿದರು.

ಪ್ರಕರಣದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯವು ಜೂನ್ 5 ರಂದು ವಜಾಗೊಳಿಸಿತ್ತು. ಆದರೆ, ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರ ವೈದ್ಯಕೀಯ ಅಗತ್ಯಗಳನ್ನು ನೋಡಿಕೊಳ್ಳುವಂತೆ ನ್ಯಾಯಾಧೀಶರು ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚಿಸಿದ್ದರು.

ನ್ಯಾಯಾಧೀಶರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 19ರವರೆಗೆ ವಿಸ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT