ಅಮರಾವತಿ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಕಂಟೈನರ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ಸೀತನಪಲ್ಲಿಯಲ್ಲಿ ಈ ಘಟನೆ ನಡೆದಿದೆ.
ಎರಡೂ ವಾಹನಗಳ ಚಾಲಕರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ.
ಅಪಘಾತ ಸಂಭವಿಸಿದಾಗ ಟ್ರಕ್ನಲ್ಲಿ ಹತ್ತು ಜನರಿದ್ದರು ಮತ್ತು ಇನ್ನೊಂದು ವಾಹನದಲ್ಲಿ ಚಾಲಕ ಮತ್ತು ಸಹಾಯಕ ಇದ್ದರು ಎಂದು ಅಧಿಕಾರಿ ಹೇಳಿದರು.
ಸದ್ಯ ಈ ಸಂಬಂಧ ತನಿಖೆ ನಡೆಯುತ್ತಿದೆ.