ಮಣಿಪುರ ಸಿಎಂ ಬಂಗಲೆ ಬಳಿ ಅಗ್ನಿ ಅವಘಡ 
ದೇಶ

ಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!

ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ಗುವಾಹಟಿ: ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ಈ ಕಟ್ಟಡ ಗೋವಾದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಎಎಸ್ ಅಧಿಕಾರಿ ತಂಗ್ಖೋಪಾವೊ ಕಿಪ್ಗೆನ್ ಅವರ ಕುಟುಂಬದ ಒಡೆತನದಲ್ಲಿದೆ. ಅವರು 2005 ರಲ್ಲಿ ನಿಧನರಾದರು.ಕಳೆದ ವರ್ಷದಿಂದ ಕಟ್ಟಡವನ್ನು ಅನಾಥವಾಗಿ ಬಿಡಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಮೂರು ಅಗ್ವಿಶಾಮಕ ವಾಹನಗಳು ಸ್ಥಳಕ್ಕೆ ಧಾರಿವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮಣಿಪುರದಲ್ಲಿ ಹಿಂಸಾಚಾರ ನಡೆದಾಗಿನಿಂದ ಮನೆಯನ್ನು ಅನಾಥವಾಗಿ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಬೆಂಕಿಯ ಪರಿಣಾಮವಾಗಿ, ಮನೆಯ ಮೊದಲ ಮಹಡಿ ಭಾಗಶಃ ಸುಟ್ಟುಹೋಗಿದೆ, ಬೆಂಕಿಗೆ ನಿಖರವಾದ ಕಾರಣ ತಿಳಿದಿಲ್ಲ. ಘಟನೆಯ ಸತ್ಯತೆ ಕಂಡುಹಿಡಿಯಲು ತನಿಖೆಗಾಗಿ ಇಂಫಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!