NCERT ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ 
ದೇಶ

ಗಲಭೆಗಳ ಬಗ್ಗೆ ಏಕೆ ಕಲಿಸಬೇಕು? ಪಠ್ಯಕ್ರಮವನ್ನು ಕೇಸರಿಕರಣಗೊಳಿಸುವ ಪ್ರಯತ್ನ ನಡೆದಿಲ್ಲ: NCERT

ಶಾಲಾ ಪಠ್ಯಕ್ರಮ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ NCERT ನಿರ್ದೇಶಕರು, ಗುಜರಾತ್ ಗಲಭೆ ಮತ್ತು ಬಾಬರಿ ಮಸೀದಿ ಧ್ವಂಸ ಕುರಿತ ಉಲ್ಲೇಖಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ. ಏಕೆಂದರೆ ಗಲಭೆಗಳ ಕುರಿತ ಬೋಧನೆಯು ಹಿಂಸಾತ್ಮಕ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ದೆಹಲಿ: ಶಾಲಾ ಪಠ್ಯಕ್ರಮ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ NCERT ನಿರ್ದೇಶಕರು, ಗುಜರಾತ್ ಗಲಭೆ ಮತ್ತು ಬಾಬರಿ ಮಸೀದಿ ಧ್ವಂಸ ಕುರಿತ ಉಲ್ಲೇಖಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ. ಏಕೆಂದರೆ ಗಲಭೆಗಳ ಕುರಿತ ಬೋಧನೆಯು ಹಿಂಸಾತ್ಮಕ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ಶನಿವಾರ ಪಿಟಿಐ ಕೇಂದ್ರ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ, ಪ್ರತಿ ವರ್ಷ ನಡೆಸುವ ಪರಿಷ್ಕರಣೆ ಭಾಗವಾಗಿ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿದ್ದು, ವಿವಾದ ಎಬ್ಬಿಸುವಂತಹ ವಿಷಯವೇ ಇದಲ್ಲ ಎಂದಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಗುಜರಾತ್ ಗಲಭೆ ಅಥವಾ ಬಾಬರಿ ಮಸೀದಿ ಧ್ವಂಸ ಕುರಿತ ಮಾಹಿತಿ ಮಾರ್ಪಡಿಸಿರುವುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಸಕ್ಲಾನಿ, ಶಾಲಾ ಪಠ್ಯಪುಸ್ತಕಗಳಲ್ಲಿ ಗಲಭೆಗಳ ಬಗ್ಗೆ ಏಕೆ ಕಲಿಸಬೇಕು? ನಾವು ಸಕಾರಾತ್ಮಕ ಯೋಚನೆ ಹೊಂದಿರುವಂತಹ ನಾಗರಿಕರನ್ನು ರೂಪಿಸಬೇಕೇ ಹೊರತು, ರೋಷಾವೇಶದ ಮತ್ತು ಖಿನ್ನರಾದ ವ್ಯಕ್ತಿಗಳನ್ನಲ್ಲ ಎಂದರು.

ಆಕ್ರಮಣಶೀಲರಾಗುವಂತೆ ನಮ್ಮ ವಿದ್ಯಾರ್ಥಿಗಳಿಗೆ ಕಲಿಸಬೇಕೇ? ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕುವ ಅಥವಾ ದ್ವೇಷಕ್ಕೆ ಬಲಿಯಾಗುವ ರೀತಿಯಲ್ಲಿ ಕಲಿಸಬೇಕೇ? ಇದು ನಮ್ಮ ಶಿಕ್ಷಣದ ಉದ್ದೇಶವೇ? ಚಿಕ್ಕ ಮಕ್ಕಳಿಗೆ ನಾವು ಗಲಭೆಗಳ ಬಗ್ಗೆ ಕಲಿಸಬೇಕೇ? ಅವರು ಬೆಳೆದಾಗ, ಅವರು ಅದರ ಬಗ್ಗೆ ಕಲಿಯಬಹುದು ಆದರೆ ಶಾಲಾ ಪಠ್ಯಪುಸ್ತಕಗಳಲ್ಲಿ ಯಾಕೆ? ಅವರು ಬೆಳೆದಾಗ ಅದು ಏಕೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಡಿ, ಬದಲಾವಣೆಗಳ ಬಗ್ಗೆ ಅಳುವುದು ಅಪ್ರಸ್ತುತ ಎಂದು ಹೇಳಿದರು.

ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳು ಮಾರುಕಟ್ಟೆಗೆ ಬಂದಿರುವ ಈ ಸಂದರ್ಭದಲ್ಲಿ ಸಕ್ಲಾನಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ, 2020ಕ್ಕೆ ಅನುಗುಣವಾಗಿ ಎನ್ ಸಿಇಆರ್ ಟಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುತ್ತಿದೆ.

ಪಠ್ಯಕ್ರಮವನ್ನು ಕೇಸರೀಕರಣಗೊಳಿಸಲಾಗುತ್ತಿದೆ ಆರೋಪಗಳಿಗೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತೀಯ ಜ್ಞಾನ ವ್ಯವಸ್ಥೆ ಕುರಿತು ಮಕ್ಕಳಿಗೆ ತಿಳಿಸಿದರೆ ಅದು ಕೇಸರೀಕರಣ ಹೇಗಾಗುತ್ತದೆ? ಮೆಹ್ರೌಲಿಯಲ್ಲಿರುವ ಕಬ್ಬಿಣದ ಕಂಬದ ಬಗ್ಗೆ ವಿವರಿಸಿ, ಲೋಹ ವಿಜ್ಞಾನದಲ್ಲಿ ಭಾರತೀಯರು ಆಗಿನ ಕಾಲದಲ್ಲಿಯೇ ಸಾಧನೆ ಮಾಡಿದ್ದರು ಎಂದು ಹೇಳುವುದು ತಪ್ಪೇ? ಇದು ಹೇಗೆ ಕೇಸರೀಕರಣಗವಾಗುತ್ತದೆ ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT