ಸಾಂದರ್ಭಿಕ ಚಿತ್ರ 
ದೇಶ

ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಸತತ 6ನೇ ಬಾರಿಗೆ ಈದ್ ಪ್ರಾರ್ಥನೆಗೆ ಅವಕಾಶ ನಿರಾಕರಣೆ

ಶ್ರೀನಗರದ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷ ಈದ್ ಪ್ರಾರ್ಥನೆಗೆ ಸ್ಥಳೀಯ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ.

ಶ್ರೀನಗರ: ಶ್ರೀನಗರದ ಐತಿಹಾಸಿಕ ಜಾಮಾ ಮಸೀದಿಯಲ್ಲಿ ಸತತ ಆರನೇ ವರ್ಷ ಈದ್ ಪ್ರಾರ್ಥನೆಗೆ ಸ್ಥಳೀಯ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ ಎಂದು ಸೋಮವಾರ ಅಂಜುಮನ್ ಔಕಾಫ್ ಜಮಾ ಮಸೀದಿ ತಿಳಿಸಿದೆ.

ಇಂದು ಫಜ್ರ್ ಪ್ರಾರ್ಥನೆಯ ನಂತರ, ಪೊಲೀಸ್ ಸಿಬ್ಬಂದಿ ಶ್ರೀನಗರದ ಜಮಾ ಮಸೀದಿಯ ಗೇಟ್‌ಗಳನ್ನು ಮುಚ್ಚಿದರು ಮತ್ತು ಮಸೀದಿಯಲ್ಲಿ ಬೆಳಗ್ಗೆ 9 ಗಂಟೆಗೆ ನಿಗದಿಪಡಿಸಲಾದ ಈದ್ ಪ್ರಾರ್ಥನೆಗೆ ಅನುಮತಿ ನೀಡಿಲ್ಲ ಎಂದು 14 ನೇ ಶತಮಾನದ ಮಸೀದಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈದ್ ಧರ್ಮೋಪದೇಶ ನೀಡಬೇಕಾಗಿದ್ದ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

2019 ರಿಂದ ಅಧಿಕಾರಿಗಳು ಜಾಮಾ ಮಸೀದಿ ಮತ್ತು ಈದ್ಗಾದಲ್ಲಿ ಈದ್ ಪ್ರಾರ್ಥನೆಗಳನ್ನು ನಿರ್ಬಂಧಿಸಿದ್ದಾರೆ. ಮಸೀದಿಯಲ್ಲಿ ಸತತ 6ನೇ ಬಾರಿಗೆ ಈದ್ ಪ್ರಾರ್ಥನೆಗೆ ಅವಕಾಶ ನಿರಾಕರಿಸಿರುವುದು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ" ಎಂದು ಕರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT