ಬಂಡಿಪೋರಾದಲ್ಲಿ ಎನ್ಕೌಂಟರ್; ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಬಂಡಿಪೋರಾ ಜಿಲ್ಲೆಯ ಅರಗಾಮ್ ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ.
ಭಯೋತ್ಪಾದಕರು ಅವಿತು ಕುಳಿತಿದ್ದ ಅಡಗುತಾಣವನ್ನು ಭದ್ರತಾ ಪಡೆಗಳು ಸುತ್ತುವರಿದಾಗ ಗುಂಡಿನ ಚಕಮಕಿ ಆರಂಭವಾಯಿತು. ಎನ್ಕೌಂಟರ್ನಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಗುರುತು ಕಂಡು ಹಿಡಿಯಲು ಯತ್ನಿಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.
ಆರಂಭದಲ್ಲಿ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಆಗಮಿಸಿ ಅವರನ್ನು ಸುತ್ತುವರಿದ ಬಳಿಕ ಸುಮ್ಮನಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.