ಸಂಗ್ರಹ ಚಿತ್ರ 
ದೇಶ

ವೃದ್ಧ ತಂದೆ-ತಾಯಿಯ ಕರೆದೊಯ್ತಿದ್ದ ಬೈಕ್ ಗೆ ಟ್ರಕ್ ಡಿಕ್ಕಿ: ಸವಾರರನ್ನು 200 ಮೀಟರ್ ಎಳೆದೊಯ್ದು ಇಬ್ಬರು ದುರ್ಮರಣ

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ.

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದು ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದನು.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದಿದ್ದು ಆರೋಪಿ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಪುರ್ನಿಯಾ ನಗರದ ಮಹಾಮಾಯಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತ ದಂಪತಿಯನ್ನು 72 ವರ್ಷದ ಲಾಲು ಓರಾನ್ ಮತ್ತು 65 ವರ್ಷದ ಪಾರ್ವತಿ ದೇವಿ ಎಂದು ಗುರುತಿಸಲಾಗಿದೆ. ಅವರ ಮಗ 23 ವರ್ಷದ ಸಿಲ್ವೆಸ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಭಾನುವಾರ ಸಂಜೆ 4 ಗಂಟೆಗೆ ಸಿಲ್ವೆಸ್ಟರ್ ತನ್ನ ಪೋಷಕರೊಂದಿಗೆ ಬೈಕ್‌ನಲ್ಲಿ ಜೀಲ್ ಟೋಲಾ ಗ್ರಾಮದಿಂದ ಹೊರಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರ್ಗಮಧ್ಯೆ ವೇಗವಾಗಿ ಬಂದ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸಮೇತ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಟ್ರಕ್ ನಿಲ್ಲದೆ ಮುಂದೆ ಸಾಗಿದೆ. ಟ್ರಕ್ ಮೂವರನ್ನೂ 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದೆ.

ಸದ್ಯ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರಿಗೆ ಅಲ್ಲಿ ರೋದನ ಮುಗಿಲು ಮುಟ್ಟಿತ್ತು. ಅಪಘಾತದ ಸ್ಥಳ ಅತ್ಯಂತ ಭಯಾನಕವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಆರೋಪಿ ಟ್ರಕ್ ಚಾಲಕ ಪೊಲೀಸರ ವಶದಲ್ಲಿದ್ದಾನೆ. ಆತನ ವಿರುದ್ಧ ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!