ಭೂಪೇಂದ್ರ ಯಾದವ್, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ online desk
ದೇಶ

ವಿಧಾನಸಭಾ ಚುನಾವಣೆ: ಬಿಜೆಪಿ ಉಸ್ತುವಾರಿಗಳಾಗಿ 5 ಕೇಂದ್ರ ಸಚಿವರ ನೇಮಕ!

ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವಷ್ಟು ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದ್ದು, ಈಗ ವಿಧಾನಸಭೆಯತ್ತ ಬಿಜೆಪಿ ತನ್ನ ಗಮನವನ್ನು ಕೇಂದ್ರೀಕರಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವಷ್ಟು ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದ್ದು, ಈಗ ವಿಧಾನಸಭೆಯತ್ತ ಬಿಜೆಪಿ ತನ್ನ ಗಮನವನ್ನು ಕೇಂದ್ರೀಕರಿಸಿದೆ.

ವರ್ಷಾಂತ್ಯಕ್ಕೆ ಮಹಾರಾಷ್ಟ್ರ, ಜಾರ್ಖಂಡ್, ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೋಮವಾರದಂದು ಈ ರಾಜ್ಯಗಳಿಗೆ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಮಹಾರಾಷ್ಟ್ರಕ್ಕೆ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದರೆ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಹ ಉಸ್ತುವಾರಿಯಾಗಿದ್ದಾರೆ. ಹರ್ಯಾಣಗೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಹಾಗೂ ಮಾಜಿ ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರನ್ನು ಉಸ್ತುವಾರಿ, ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಜಾರ್ಖಂಡ್‌ಗೆ, ಕೇಂದ್ರ ಸಚಿವ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಉಸ್ತುವಾರಿ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಹ ಉಸ್ತುವಾರಿ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಜಮ್ಮು-ಕಾಶ್ಮೀರಕ್ಕೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವಾಗ, ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್‌ನೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

"ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಾದೇಶಿಕ ರಾಜಕೀಯವನ್ನು ರೂಪಿಸುವುದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರೀಯ ರಾಜಕೀಯ ನಿರೂಪಣೆಗಳ ಮೇಲೆ ಪ್ರಭಾವ ಬೀರುತ್ತದೆ" ಎಂದು ಬಿಜೆಪಿಯ ಹಿರಿಯ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಬಿಜೆಪಿಯ ಯಶಸ್ವಿ ಪ್ರಚಾರದ ಹೆಗ್ಗಳಿಕೆಗೆ ಪಾತ್ರರಾದ ಭೂಪೇಂದ್ರ ಯಾದವ್ ಮತ್ತು ವೈಷ್ಣವ್ ಅವರಿಗೆ "ಮಹಾರಾಷ್ಟ್ರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ತರುವ ಕಾರ್ಯವನ್ನು ನಿಯೋಜಿಸಲಾಗಿದೆ" ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. "ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಏಕನಾಥ್ ಶಿಂಧೆ ಬಣದೊಂದಿಗೆ ಮೈತ್ರಿ ಮಾಡಿಕೊಂಡ ನಂತರ, ನಮ್ಮ ಪಕ್ಷ ಈಗ ಕಾಂಗ್ರೆಸ್-ಶಿವಸೇನೆ-ಎನ್‌ಸಿಪಿ ಒಕ್ಕೂಟವನ್ನು ಎದುರಿಸುವ ಗುರಿ ಹೊಂದಿದೆ" ಎಂದು ಅವರು ಹೇಳಿದರು.

ಸಾಂಸ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ತಂಡಕ್ಕೆ ನಿಕಟವಾಗಿರುವ ಬಿಜೆಪಿಯ ಹಿರಿಯ ನಾಯಕರೊಬ್ಬರು, "ಪರಿಣಿತ ನಾಯಕರನ್ನು ನೇಮಿಸುವಲ್ಲಿ ಬಿಜೆಪಿಯ ಪೂರ್ವಭಾವಿ ನಿಲುವು ಲೋಕಸಭೆ ಚುನಾವಣೆಯಿಂದ ಲಾಭವನ್ನು ಕ್ರೋಢೀಕರಿಸುವ ಅದರ ತಂತ್ರವನ್ನು ಪ್ರತಿಬಿಂಬಿಸುತ್ತದೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT