ದೇಶ

ದೇಶದ 41 ವಿಮಾನ ನಿಲ್ದಾಣಗಳು, ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್‌ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್‌ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣಗಳಲ್ಲಿ ಮಧ್ಯಾಹ್ನ 12.40 ರ ಸುಮಾರಿಗೆ ಇ-ಮೇಲ್ ಐಡಿ exhumedyou888@gmail.com ನಿಂದ ಇಮೇಲ್‌ ಸ್ವೀಕರಿಸಲಾಗಿದೆ. "KNR" ಎಂದು ಕರೆಯಲಾಗುವ ಆನ್‌ಲೈನ್ ಗುಂಪು ಈ ಸುಳ್ಳು ಬೆದರಿಕೆ ಇಮೇಲ್‌ಗಳ ಹಿಂದೆ ಇದೆ ಎಂದು ಶಂಕಿಸಲಾಗಿದೆ.

ಈ ಗುಂಪು ಮೇ 1 ರಂದು ದೆಹಲಿ-ಎನ್‌ಸಿಆರ್‌ನ ಹಲವಾರು ಶಾಲೆಗಳಿಗೆ ಇದೇ ರೀತಿಯ ಇಮೇಲ್‌ ಮಾಡಿತ್ತು ಎನ್ನಲಾಗಿದೆ. ವಿಮಾನ ನಿಲ್ದಾಣಗಳು ಸ್ವೀಕರಿಸಿದ ಇಮೇಲ್‌ಗಳು ಬಹುತೇಕ ಒಂದೇ ರೀತಿಯ ಸಂದೇಶ ಹೊಂದಿದ್ದವು: "ಹಲೋ, ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಬಾಂಬ್‌ಗಳು ಶೀಘ್ರದಲ್ಲೇ ಸ್ಫೋಟಗೊಳ್ಳಲಿದ್ದು, ನೀವೆಲ್ಲರೂ ಸಾಯುತ್ತೀರಿ ಎಂದು ಆತಂಕ ಹುಟ್ಟಿಸಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳು ಇದು ಹುಸಿ ಬೆದರಿಕೆ ಎಂದು ವರದಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ ಮುಂಬೈನ ಜಸ್ಲೋಕ್, ರಹೇಜಾ, ಸೆವೆನ್ ಹಿಲ್, ಕೊಹಿನೂರ್ ಆಸ್ಪತ್ರೆ ಸೇರಿದಂತೆ 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. VPN ನೆಟ್‌ವರ್ಕ್ ಬಳಸಿ ಈ ಇಮೇಲ್ ಕಳುಹಿಸಲಾಗಿದೆ. ಕಳುಹಿಸುವವರ ಗುರುತು ಮತ್ತು ಬೆದರಿಕೆಯ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ