ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು.
ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಎರಡು ಶವಗಳು ಕಂಡುಬಂದಿವೆ. ಆದರೆ ಅವುಗಳನ್ನು ಇನ್ನು ವಶಕ್ಕೆ ಪಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ - ಒಬ್ಬ ಪೊಲೀಸ್ ಮತ್ತು ಒಬ್ಬರು ಸೇನಾ ಯೋಧ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.