ಶಿರೀಶ್ ಭಾರಧ್ವಾಜ್ 
ದೇಶ

ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಶಿರೀಶ್ ಭಾರಧ್ವಾಜ್ ಹಠಾತ್ ನಿಧನ

ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರದ್ವಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರೀಜಾ ಕೊನಿಡೆಲಾ ಅವರನ್ನು ವಿವಾಹವಾಗಿದ್ದರು.

ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರೀಜಾ ಕೊನಿಡೆಲಾ ಅವರನ್ನು ವಿವಾಹವಾಗಿದ್ದರು.

ಅಸಲಿಗೆ ಈ ವಿವಾಹಕ್ಕೆ ಚಿರಂಜೀವಿ ಅವರ ತೀವ್ರ ವಿರೋಧವಿತ್ತು, ಹಾಗಾಗಿ ಕುಟುಂಬಕ್ಕೆ ತಿಳಿಯದೆ ಶಿರೀಶ್ ಹಾಗೂ ಶ್ರೀಜಾ ವಿವಾಹವಾಗಿದ್ದರು. ಆದರೆ ಬಳಿಕ ಶ್ರಿಜಾ, ಶೀರೀಶ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು, ಇಂದು ಬೆಳಿಗ್ಗೆ ಶಿರೀಶ್ ನಿಧನ ಹೊಂದಿದ್ದಾರೆ.

ಶಿರೀಶ್ ಕಳೆದ ಕೆಲವು ತಿಂಗಳಿನಿಂದಲ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೆ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶಿರೀಶ್ ಹಾಗೂ ಶ್ರೀಜಾ ಕುಟುಂಬದವರನ್ನು ಎದುರು ಹಾಕಿಕೊಂಡು ವಿವಾಹವಾಗಿದ್ದು ಭಾರಿ ವಿವಾದ ಎಬ್ಬಿಸಿತ್ತು. ಆ ಸಮಯದಲ್ಲಿ ಪವನ್ ಕಲ್ಯಾಣ್ ಸೇರಿದಂತೆ ಕೆಲವರಿಂದ ತಮಗೆ ಬೆದರಿಕೆ ಇರುವುದಾಗಿ ಶ್ರೀಜಾ ದೂರು ಸಹ ದಾಖಲಿಸಿದ್ದರು. ಶ್ರೀಜಾ ಹಾಗೂ ಶಿರೀಶ್ ವಿವಾಹದ ಹಿಂದೆ ರಾಜಕೀಯ ಒತ್ತಡವೂ ಇತ್ತು ಎನ್ನಲಾಗಿತ್ತು.

ಶ್ರೀಜಾ ಹಾಗೂ ಶಿರೀಶ್ ಮದುವೆಯಾದ ಕೆಲ ವರ್ಷಗಳಲ್ಲಿ ಅವರಿಗೆ ಮಗಳೊಬ್ಬಳು ಜನಿಸಿದಳು. ಅದಾದ ಬಳಿಕ ಶ್ರೀಜಾ ಶಿರೀಶ್ ಅವರಿಂದ ವಿಚ್ಛೇದನ ಪಡೆದು ಮರು ಮದುವೆ ಆದರು. ಆ ಬಳಿಕ ಶಿರೀಶ್ ಸಹ ಮತ್ತೊಂದು ಮದುವೆಯಾದರು. ವೃತ್ತಿಯಲ್ಲಿ ವಕೀಲರಾಗಿದ್ದ ಶಿರೀಶ್, ಬಿಜೆಪಿ ಪಕ್ಷ ಸೇರ್ಪಡೆಗೊಂಡು ರಾಜಕೀಯ ಪಯಣವನ್ನೂ ಸಹ ಆರಂಭಿಸಿದ್ದರು. ಆದರೆ ರಾಜಕೀಯದಲ್ಲಿ ಹೆಚ್ಚಿಗೇನು ಸಾಧಿಸಲಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT