ಪ್ರಧಾನಿ ಮೋದಿ 
ದೇಶ

ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿಯೊಂದಿಗೆ 7,000 ಜನರ ಭಾಗಿ

ಜಮ್ಮು-ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದ ದಡದ ಮೇಲೆ ನಡೆಯಲಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ವಿವಿಧ ಭಾಗಗಳಿಂದ ಸುಮಾರು 7,000ಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದ ದಡದ ಮೇಲೆ ನಡೆಯಲಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ವಿವಿಧ ಭಾಗಗಳಿಂದ ಸುಮಾರು 7,000ಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನದಂದು ಕಾಶ್ಮೀರ ಕಣಿವೆಗೆ ಮೋದಿ ಆಗಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅವರು ಜೂನ್ 21 ರಂದು ಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಸುಮಾರು 7 ಸಾವಿರ ಜನರೊಂದಿಗೆ ಯೋಗ ಮಾಡಲಿದ್ದಾರೆ ಎಂದು ಸಿನ್ಹಾ ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದೊಂದಿಗೆ ವಿಶೇಷ ನಂಟು ಹೊಂದಿದ್ದಾರೆ. ಇದೇ ಕಾರಣದಿಂದ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಶ್ರೀನಗರದಲ್ಲಿ ಆಚರಿಸಲು ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 23 ಲಕ್ಷ ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜನರಲ್ಲಿ ಯೋಗ ಮಾಡುವತ್ತ ಒಲವು ಹೆಚ್ಚಿರುವುದನ್ನು ನಾವು ನೋಡಬಹುದು. ಒತ್ತಡ ಮುಕ್ತ ಜೀವನಕ್ಕಾಗಿ ಜನರು ಯೋಗದತ್ತ ಒಲವು ತೋರುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT