ಭರ್ತೃಹರಿ ಮಹತಾಬ್  
ದೇಶ

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಗುರುವಾರ ನೇಮಕ ಮಾಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಜನತಾ ಪಕ್ಷದ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಗುರುವಾರ ನೇಮಕ ಮಾಡಿದ್ದಾರೆ.

ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರು ಸ್ಪೀಕರ್ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ನೂತನ ಸಭಾಧ್ಯಕ್ಷರ ಆಯ್ಕೆಯಾಗುವವರೆಗೆ ಸ್ಪೀಕರ್ ಕರ್ತವ್ಯಗಳನ್ನು ನಿರ್ವಹಿಸಲು ಸಂವಿಧಾನದ 95 (1) ನೇ ವಿಧಿಯ ಅಡಿಯಲ್ಲಿ ಹಂಗಾಮಿ ಸ್ಪೀಕರ್ ಆಗಿ ಲೋಕಸಭೆಯ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹಂಗಾಮಿ ಸ್ಪೀಕರ್ ಹುದ್ದೆಯನ್ನು ಲೋಕಸಭೆಯ ಸಂಪ್ರದಾಯದಂತೆ ಸಂಸತ್ತಿನ ಹಿರಿಯ ಸದಸ್ಯರಿಗೆ ನೀಡಲಾಗುತ್ತದೆ. ಸ್ಪೀಕರ್ ಹುದ್ದೆಗೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗುವುದಕ್ಕೂ ಮುನ್ನ ಹಂಗಾಮಿ ಸ್ಪೀಕರ್ ಅವರು ಪ್ರಧಾನಿ, ಕೇಂದ್ರ ಸಚಿವರಿಗೆ ಮತ್ತು ಎಲ್ಲ ಸಂಸದರಿಗೆ ಪ್ರಮಾಣ ವಚನ ಬೋಧಿಸುವ ಕರ್ತವ್ಯ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!