ಪ್ರಧಾನಿ ಮೋದಿ 
ದೇಶ

ಲೋಕಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಮೊದಲ ಭೇಟಿ; ಶ್ರೀನಗರಕ್ಕೆ ಪ್ರಧಾನಿ ಮೋದಿ ಆಗಮನ

ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಜಮ್ಮು-ಕಾಶ್ಮೀರಕ್ಕೆ ಇದು ಮೋದಿ ಅವರ ಮೊದಲ ಭೇಟಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸುಮಾರು 1,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಸುಮಾರು 1,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀನಗರಕ್ಕೆ ಆಗಮಿಸಿದ ನಂತರ ಯುವ ಜನತೆಯ ಅಭಿವೃದ್ಧಿ ಕೇಂದ್ರೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಜಮ್ಮು-ಕಾಶ್ಮೀರಕ್ಕೆ ಇದು ಮೋದಿ ಅವರ ಮೊದಲ ಭೇಟಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸುಮಾರು 1,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ರೂ. 1,800 ಕೋಟಿ ಮೊತ್ತದ ಕೃಷಿ ಸಂಬಂಧಿತ ವಲಯಗಳ ಸ್ಪರ್ಧಾತ್ಮಕ ಸುಧಾರಣೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ನಾಳೆ ಬೆಳಗ್ಗೆ 6-30ಕ್ಕೆ ಶ್ರೀನಗರದ ಎಸ್ ಕೆಐಸಿಸಿಯಲ್ಲಿ ನಡೆಯಲಿರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿಯವರ ಎರಡು ದಿನಗಳ ಕಾಶ್ಮೀರ ಭೇಟಿ ಹಿನ್ನೆಲೆಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಂದರವಾದ ದಾಲ್ ಸರೋವರದ ದಡದಲ್ಲಿ ಶುಕ್ರವಾರ ಯೋಗ ಪ್ರದರ್ಶನದಲ್ಲಿ 7,000 ಕ್ಕೂ ಹೆಚ್ಚು ಭಾಗವಹಿಸುವರು.

ಪ್ರಧಾನಮಂತ್ರಿಯವರು ಪ್ರದರ್ಶಿಸುವ ಯೋಗ 'ಆಸನ'ಗಳಲ್ಲಿ ಭಾಗವಹಿಸುವವರಿಗೆ ಕಳೆದ ಮೂರು ದಿನಗಳಿಂದ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!