ಮೃತರ ಸಾಮೂಹಿಕ ಅಂತ್ಯಕ್ರಿಯೆಗೆ ತಯಾರಿ 
ದೇಶ

ತಮಿಳುನಾಡು ಅಕ್ರಮ ಮದ್ಯ ದುರಂತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ; ಇನ್ನೂ ಹೆಚ್ಚಾಗುವ ಸಾಧ್ಯತೆ

ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ.

ಚೆನ್ನೈ: ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ. ಬುಧವಾರದ ಅಕ್ರಮ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 37 ಕ್ಕೆ ಏರಿದೆ ಮತ್ತು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ದಿನಗೂಲಿ ಕಾರ್ಮಿಕರಾಗಿದ್ದು, ಅವರು ಟಾಸ್ಮಾಕ್(ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್) ಮಳಿಗೆಗಳಲ್ಲಿ ಮಾರಾಟವಾಗುವ ಭಾರತೀಯ ನಿರ್ಮಿತ ವಿದೇಶಿ ಮದ್ಯ ಖರೀದಿಸಲು ಸಾಧ್ಯವಿಲ್ಲ. ಆದ್ದರಿಂದ, ಅವರು ಅಗ್ಗದ ದರದಲ್ಲಿ ದೊರೆಯುವ ನಕಲಿ ಮದ್ಯವನ್ನು ಅವಲಂಬಿಸಿದ್ದಾರೆ. ಸಂತ್ರಸ್ತರು ಎರಡು ಗುಡಿಸಲುಗಳಲ್ಲಿ ಮಾರಾಟ ಮಾಡುತ್ತಿದ್ದ ಅಕ್ರಮ ಮದ್ಯವನ್ನು ಸೇವಿಸಿ ಅಸ್ವಸ್ಥರಾಗಿದ್ದರು.

ದುರಂತಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಮದ್ಯ ಮಾದರಿಗಳಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿ ಪ್ರವೀಣ್‌ಕುಮಾರ್ (26), ಡಿ ಸುರೇಶ್ (40), ಕೆ ಶೇಖರ್ (59), ಎಸ್ ವಡಿವುಕ್ಕರಸಿ, ಸಿ ಕಂದನ್, ಪಿ ಜಗದೀಶನ್, ಆರ್ ಸುರೇಶ್, ಎಂ ಸೆಲ್ವಂ ಮತ್ತು ಎಂ ಆರುಮುಗಂ ಎಂದು ಗುರುತಿಸಲಾಗಿದೆ. ಇತರ ಸಂತ್ರಸ್ತರ ಹೆಸರುಗಳನ್ನು ಇನ್ನೂ ದೃಢೀಕರಿಸಲಾಗಿಲ್ಲ.

ಮೂಲಗಳ ಪ್ರಕಾರ ಒಟ್ಟು 107 ಜನರನ್ನು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 59 ಜನರನ್ನು ಸೇಲಂ, ವಿಲ್ಲುಪುರಂ ಮತ್ತು ಪುದುಚೇರಿಯಂತಹ ಇತರ ಸ್ಥಳಗಳ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಉಲ್ಲೇಖಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.

ಸಿಬಿಸಿಐಡಿಯಿಂದ ಪ್ರಕರಣದ ತನಿಖೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಕರಣದ ತನಿಖೆ ನಡೆಸುವಂತೆ ಸಿಬಿಸಿಐಡಿ ಆದೇಶಿಸಿದ್ದಾರೆ. ಸಚಿವರೊಂದಿಗೆ ಪರಿಶೀಲನಾ ಸಭೆಯನ್ನೂ ನಡೆಸಿದ್ದು,

ಈ ಕುರಿತು ತನಿಖೆ ನಡೆಸಲು ಸಿಬಿಸಿಐಡಿ ಹಲವು ತಂಡಗಳನ್ನು ರಚಿಸಿದೆ.

ಪ್ರಯೋಗಾಲಯದ ಪರೀಕ್ಷೆಯು ಅರಕ್ ಮಾದರಿಗಳಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯನ್ನು ತೋರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT