ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ 
ದೇಶ

NEET, ಯುಜಿಸಿ-ನೆಟ್ ಪರೀಕ್ಷೆಗಳಲ್ಲಿ ಅಕ್ರಮ, ತನಿಖೆಗೆ ಸಮಿತಿ ರಚನೆ; ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಧರ್ಮೇಂದ್ರ ಪ್ರಧಾನ್

ಗುರುವಾರ ಬೆಳಗ್ಗೆ ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಮತ್ತು ನೀಟ್‌ನಲ್ಲಿನ ಅಕ್ರಮಗಳ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ವಿವಿಧ ವಿದ್ಯಾರ್ಥಿಗಳ ಸಂಘಟನೆಗಳ ಸದಸ್ಯರು ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.

ನವದೆಹಲಿ: NEET-UG ಮತ್ತು UGC-NET ಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಮತ್ತು ಅಕ್ರಮದ ವಿವಾದದ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಮತ್ತು ಸುಧಾರಿಸಲು ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಘೋಷಿಸಿದ್ದಾರೆ.

ಗುರುವಾರ ಬೆಳಗ್ಗೆ ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಮತ್ತು ನೀಟ್‌ನಲ್ಲಿನ ಅಕ್ರಮಗಳ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ವಿವಿಧ ವಿದ್ಯಾರ್ಥಿಗಳ ಸಂಘಟನೆಗಳ ಸದಸ್ಯರು ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.

ಯುಜಿಸಿ-ನೆಟ್‌ನಂತೆಯೇ NEET ಯುಜಿ ಪರೀಕ್ಷೆಗಳನ್ನು ರದ್ದುಗೊಳಿಸಲು ಸರ್ಕಾರ ಯೋಜಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಲ್ಲಿ ನಡೆದ ಅಕ್ರಮದ ಘಟನೆಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾದ ಅನೇಕ ವಿದ್ಯಾರ್ಥಿಗಳ ಸಾಧನೆಗಳನ್ನು ಮರೆಮಾಡಬಾರದು ಎಂದು ಹೇಳಿದರು. NEET ಪರೀಕ್ಷೆಯನ್ನು ಮತ್ತೆ ನಡೆಸಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿರುವಂತೆಯೇ ಪ್ರಧಾನ್ ಈ ರೀತಿಯ ಹೇಳಿಕೆ ನೀಡಿದರು.

ಯಾವುದೇ ಎನ್‌ಟಿಎ ಅಧಿಕಾರಿಗಳ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ನಮ್ಮ ವ್ಯವಸ್ಥೆಗಳಲ್ಲಿ ನಮಗೆ ನಂಬಿಕೆ ಇರಲಿ; ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರವು ಸಹಿಸುವುದಿಲ್ಲ ಎಂದು ಹೇಳಿದ ಸಚಿವರು, ಈ ವಿಷಯವನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳನ್ನು ಒತ್ತಾಯಿಸಿದರು.

ನೀಟ್ ಪರೀಕ್ಷೆ MBBS, BDS, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ NTA ನಡೆಸುವ ನಿರ್ಣಾಯಕ ಪರೀಕ್ಷೆಯಾಗಿದೆ. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದ್ದು, ಸರಿಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶದ ನಿರೀಕ್ಷೆಯಿತ್ತು. ಆದರೆ. ಜೂನ್ 4ರಂದೇ ಫಲಿತಾಂಶವನ್ನು ಪ್ರಕಟಿಸಲಾಯಿತು. ಇದರಲ್ಲಿ 67 ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕಗಳನ್ನು ಗಳಿಸಿರುವುದು ಅಕ್ರಮಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಅದರಲ್ಲೂ ಹೆಚ್ಚು ಅಂಕಗಳಿಸಿದವರ ಪೈಕಿ ಆರು ಮಂದಿ ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಕೇಂದ್ರದವರಾಗಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಪೇಪರ್ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಎನ್ ಟಿಎಯಲ್ಲಿ ಭ್ರಷ್ಟಾಚಾರದ ಆರೋಪಗಳು ಆಧಾರರಹಿತವಾಗಿವೆ; ಇದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಧರ್ಮನ್ ಪ್ರಧಾನ್ ಜೂನ್ 13 ರಂದು ಹೇಳಿದ್ದರು. ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಬಗ್ಗೆಯೂ ಪ್ರತಿಕ್ರಿಯಿಸಿದ ಪ್ರಧಾನ್, ಡಾಕ್‌ನೆಟ್‌ನಲ್ಲಿ ಪೇಪರ್ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ವ್ಯವಸ್ಥೆಯನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೊಸದಾಗಿ ಯುಜಿಸಿ-ನೆಟ್ ಪರೀಕ್ಷೆಯ ಪ್ರಕಟಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುವುದು, "ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡಲು ಬದ್ಧರಾಗಿದ್ದೇವೆ" ಎಂದು ಪ್ರಧಾನ್ ಹೇಳಿದರು.

UGC-NET ಕಿರಿಯ ಸಂಶೋಧನಾ ಫೆಲೋಶಿಪ್‌ಗಳು, ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಳು ಮತ್ತು ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪಿಎಚ್‌ಡಿ ಪ್ರವೇಶಕ್ಕಾಗಿ ಭಾರತೀಯ ಪ್ರಜೆಗಳ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

SCROLL FOR NEXT