ಗುರುವಾರ ಕಲ್ಲಕುರಿಚಿಯ ಕರುಣಾಪುರಂ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಸಂತ್ರಸ್ತರ ಶವಗಳನ್ನು ಸುಡಲಾಯಿತು. 
ದೇಶ

ತಮಿಳುನಾಡು ಅಕ್ರಮ ಮದ್ಯ ಸೇವನೆ ಪ್ರಕರಣ: ಕಲ್ಲಕುರಿಚಿ ದುರಂತದಲ್ಲಿ ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೆನ್ನೈ: ಕಲ್ಲಕುರಿಚಿಯ ಕರುಣಾಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ಮೂಲಕ ಕಲ್ಲಕುರಿಚಿ ಅಕ್ರಮ ಮದ್ಯ ಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಲ್ಲಿ 25 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಅಕ್ರಮ ಮದ್ಯ ಸೇವಿಸಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಗುರುವಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ಸಚಿವ ಉದಯನಿಧಿ ಸ್ಟಾಲಿನ್, ಸಂತ್ರಸ್ತರಿಗೆ ಸಹಾಯಧನದ ಚೆಕ್ ವಿತರಿಸಿ, ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಾವಿಗೆ ಕಾರಣವಾದ ಮೆಥೆನಾಲ್ ಮೂಲದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಸಿಎಂ ಸ್ಟಾಲಿನ್ ಹೇಳಿದ್ದಾರೆ. ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT