ತೇಜಸ್ವಿ ಯಾದವ್ 
ದೇಶ

ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ಭಾಗಿ ಆರೋಪ ತಳ್ಳಿಹಾಕಿದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ತಾವು ಭಾಗಿಯಾಗಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ತಾವು ಭಾಗಿಯಾಗಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಆಡಳಿತಾರೂಢ ಎನ್‌ಡಿಎ ನಾಯಕರು ನೀಟ್ ಹಗರಣದಿಂದ ಗಮನ ಬೇರೆಡೆಗೆ ತಿರುಗಿಸಲು ಮತ್ತು ಆರೋಪಿಗಳನ್ನು ರಕ್ಷಿಸಲು ತಮ್ಮ ಹೆಸರನ್ನು ಲಿಂಕ್ ಮಾಡುತ್ತಿದ್ದಾರೆ ಎಂದು ತೇಜಸ್ವಿ ಯಾದವ್ ಅವರು ಹೇಳಿದ್ದಾರೆ.

"ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನ ಪಿಎ ಅಥವಾ ಪಿಎಸ್‌ಗೆ ಕರೆ ಮಾಡಿ ವೈಯಕ್ತಿಕವಾಗಿ ವಿಚಾರಣೆ ನಡೆಸಬಹುದು" ಎಂದು ತೇಜಸ್ವಿ ತಮ್ಮ ಸಹಾಯಕರು ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮತ್ತು ಬಿಹಾರ ಸಚಿವ ಶರ್ವಣ್ ಕುಮಾರ್ ಸೇರಿದಂತೆ ಕೆಲವು ಜೆಡಿ-ಯು ನಾಯಕರು, ಪ್ರತಿಪಕ್ಷ ನಾಯಕ ನೀಟ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಿನ್ನೆ ಆರೋಪಿಸಿದ್ದರು.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್, "ನಾನು ತನಿಖೆಗೆ ಸಿದ್ಧನಿದ್ದೇನೆ ಮತ್ತು ಮುಚ್ಚಿಡಲು ಏನೂ ಇಲ್ಲ" ಎಂದು ಹೇಳಿದರು.

ತೇಜಸ್ವಿ ಯಾದವ್ ಅವರ ಮಾಜಿ ಆಪ್ತ ಸಹಾಯಕ ಪ್ರೀತಮ್ ಕುಮಾರ್ ಅವರು ಮೇ ಮೊದಲ ವಾರದಲ್ಲಿ ಆರೋಪಿಗಳಲ್ಲಿ ಒಬ್ಬರಿಗೆ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಪ್ರಯತ್ನಿಸಿದ್ದಾರೆ ಎಂದು ಜೆಡಿ-ಯು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

ವಾಯುಮಾರ್ಗ ಬಂದ್ ಎಫೆಕ್ಟ್: ದುಬೈಗೆ ಹೊರಟ Emirates ವಿಮಾನ KIAಗೆ ವಾಪಸ್

SCROLL FOR NEXT