ದೇಶ

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ

ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಅಮರಾವತಿ: ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಸೋಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ ಮಾತಿಗೆ ತಕ್ಕಂತೆ ವೈಎಸ್‌ಆರ್‌ಸಿಪಿಯ ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಅವರು ಅಧಿಕೃತವಾಗಿ ತಮ್ಮ ಹೆಸರನ್ನು 'ಪದ್ಮನಾಭ ರೆಡ್ಡಿ' ಎಂದು ಬದಲಾಯಿಸಿಕೊಂಡಿದ್ದಾರೆ.

ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಚುನಾವಣಾ ಪೂರ್ವದಲ್ಲಿ ಪವನ್ ಕಲ್ಯಾಣ್ ಅವರನ್ನು ಸೋಲಿಸುವುದಾಗಿ ವೈಎಸ್‌ಆರ್‌ಸಿಪಿ ನಾಯಕ ಸವಾಲು ಹಾಕಿದ್ದರು.

ನನ್ನ ಹೆಸರನ್ನು ಬದಲಾಯಿಸಿಕೊಳ್ಳಲು ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ನನ್ನ ಸ್ವಂತ ಇಚ್ಛೆಯಿಂದ ಬದಲಾಯಿಸಿದ್ದೇನೆ ಎಂದು ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಜನಸೇನಾ ಮುಖ್ಯಸ್ಥರ ಅಭಿಮಾನಿಗಳು ಹಾಗೂ ಅನುಯಾಯಿಗಳು ನಿಂದನೆ ಮಾಡುತ್ತಿದ್ದಾರೆ ಎಂದು ದೂರಿದರು.

ನಿಮ್ಮನ್ನು (ಪವನ್ ಕಲ್ಯಾಣ್) ಪ್ರೀತಿಸುವ ಯುವಕರು ನಿರಂತರವಾಗಿ ಅಪಪ್ರಚಾರದ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ನನ್ನ ದೃಷ್ಟಿಯಲ್ಲಿ ಇದು ಸರಿಯಲ್ಲ. ಈ ರೀತಿ ಮಾಡುವ ಬದಲು, ಒಂದು ಕೆಲಸ ಮಾಡಿ ನಮ್ಮನ್ನು (ಕುಟುಂಬದ ಎಲ್ಲ ಸದಸ್ಯರು) ತೊಡೆದುಹಾಕಿ ಎಂದು ರೆಡ್ಡಿ ಹೇಳಿದ್ದಾರೆ.

ರೆಡ್ಡಿ ಅವರು ಕಾಪು ಸಮುದಾಯದ ಪ್ರಮುಖ ನಾಯಕರಾಗಿದ್ದು, ಕಾಪು ಮೀಸಲಾತಿಗಾಗಿ ಒತ್ತಾಯಿಸಿದ್ದರು. ಅವರು ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ವೈಎಸ್‌ಆರ್‌ಸಿಪಿಗೆ ಸೇರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್