ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ದೇಶ

NEET ರದ್ದತಿಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಧರ್ಮೇಂದ್ರ ಪ್ರಧಾನ್

ಎನ್ಇಇಟಿ ರದ್ದು ಮಾಡದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಯ ಹಿನ್ನೆಲೆಯಲ್ಲಿ ಎನ್ಇಇಟಿ ಪರೀಕ್ಷೆಯ ಕುರಿತು ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

ನವದೆಹಲಿ: ಎನ್ಇಇಟಿ (NEET) ರದ್ದು ಮಾಡದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಯ ಹಿನ್ನೆಲೆಯಲ್ಲಿ ಎನ್ಇಇಟಿ ಪರೀಕ್ಷೆಯ ಕುರಿತು ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. 2004 ಮತ್ತು 2015 ರ ಹಿಂದಿನ ಘಟನೆಗಳೊಂದಿಗೆ ಹೋಲಿಕೆ ಮಾಡಿದರೆ, ಈ ಘಟನೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಆಗಿನ ಪರಿಸ್ಥಿತಿಯಲ್ಲಿ ವ್ಯಾಪಕವಾದ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳು ಪರೀಕ್ಷೆಯ ರದ್ದತಿಗೆ ಕಾರಣವಾಯಿತು ಎಂದು ವಿವರಿಸಿದ್ದಾರೆ.

ಪರೀಕ್ಷೆಗಳನ್ನು ರದ್ದು ಮಾಡಿದರೆ, ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಉಂಟಾಗುತ್ತದೆ ಆದ್ದರಿಂದ ಪರೀಕ್ಷೆಗಳನ್ನು ರದ್ದುಗೊಳಿಸುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಧಾನ್ ಹೇಳಿದ್ದಾರೆ.

ಎನ್ ಡಿಟಿವಿ ವರದಿಯ ಪ್ರಕಾರ, ಸುಪ್ರೀಂ ಕೊರ್ಟ್ ನಲ್ಲಿ NEET ವಿಷಯವಾಗಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ತೀರ್ಪು ಅಂತಿಮವಾಗಿರಲಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರಗಳು ಮತ್ತು ಅಕ್ರಮಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಹೊಸ ಕಾನೂನು ಜೂ.21 ರಿಂದಲೇ ಜಾರಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ