ಅಯೋಧ್ಯೆ: ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾದರು. 86 ವರ್ಷದ ದೀಕ್ಷಿತ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ವಾರಣಾಸಿಯ ಮಣಿಕಾರ್ನಿಕಾ ಘಾಟ್ ನಲ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.
ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿತ್ತು. ವಾರಾಣಸಿಯ ಹಿರಿಯ ವಿದ್ವಾಂಸರಲ್ಲಿ ಒಬ್ಬರು ಎನಿಸಿಕೊಂಡಿದ್ದ ದೀಕ್ಷಿತ್ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸೇರಿದವರು. ಆದರೆ, ಅವರ ಕುಟುಂಬ ಅನೇಕ ತಲೆಮಾರುಗಳಿಂದ ವಾರಾಣಸಿಯಲ್ಲಿ ವಾಸಿಸುತಿತ್ತು. ದೀಕ್ಷಿತ್ ಅವರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.