ಡಿಯೋಘಾರ್: ವೈದ್ಯಕೀಯ ಪ್ರವೇಶ ಪರೀಕ್ಷೆ- NEET ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಆರು ಮಂದಿಯನ್ನು ಜಾರ್ಖಂಡ್ ನ ದಿಯೋಘಾರ್ ಜಿಲ್ಲೆಯಿಂದ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಡಿಯೋಘಾರ್ ನ AIIMS ಬಳಿಕ ಮನೆಯೊಂದರಲ್ಲಿ ಅವರನ್ನು ಶುಕ್ರವಾರ ರಾತ್ರಿ ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.
ಬಿಹಾರ ಪೊಲೀಸರು ನೀಡಿದ ಸುಳಿವಿನ ಆಧಾರದ ಮೇಲೆ ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಎಲ್ಲರನ್ನೂ ಬಿಹಾರಕ್ಕೆ ಕರೆದೊಯ್ಯಲಾಯಿತು ಎಂದು ಎಸ್ ಡಿಪಿಒ ರುತ್ವಿಕ್ ಶ್ರೀವಾಸ್ತವ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ NEET-UG ಪರೀಕ್ಷೆ ನಡೆದಿತ್ತು. ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4 ರಂದು ಫಲಿತಾಂಶ ಘೋಷಣೆಯಾಗಿತ್ತು. ಆದರೆ, ಬಿಹಾರ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಪೇಪರ್ ಸೋರಿಕೆಯಂತಹ ಆರೋಪ ಕೇಳಿಬಂದಿದೆ.