ನಿರ್ಮಾಣ ಹಂತದ ವೈಎಸ್ ಆರ್ ಸಿಪಿ ಕಚೇರಿ ಧ್ವಂಸ 
ದೇಶ

ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ; ಜಗನ್ ಕಿಡಿ

ಧ್ವಂಸವು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಳ್ವಿಕೆಯನ್ನು ಸೂಚಿಸುತ್ತದೆ. ಈ ಸೇಡಿನ ರಾಜಕಾರಣಕ್ಕೆ ವಿರೋಧ ಪಕ್ಷ ಬೆದರುವುದಿಲ್ಲ. ಪಕ್ಷ ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಜಗನ್ ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ರಾಜ್ಯ ಸರ್ಕಾರ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿರೋಧ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಶನಿವಾರ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನೆಲಸಮಗೊಳಿಸಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್ ಆರ್ ಸಿಪಿ ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ ಯಂತ್ರಗಳು ಮತ್ತು ಬುಲ್ಡೋಜರ್‌ಗಳಿಂದ ವೈಎಸ್‌ಆರ್‌ಸಿಪಿಯ ಕೇಂದ್ರ ಕಚೇರಿಯನ್ನು ಕೆಡವಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶನಿವಾರ ಮುಂಜಾನೆ 5.30ರ ಸುಮಾರಿಗೆ ಧ್ವಂಸ ಕಾರ್ಯಾಚರಣೆ ಪ್ರಾರಂಭವಾಗಿದೆ. "ಸಿಆರ್‌ಡಿಎ (ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ) ದ ಕ್ರಮಗಳನ್ನು ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಶುಕ್ರವಾರ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಯಾವುದೇ ಧ್ವಂಸ ಕಾರ್ಯಾಚರಣೆ ನಡೆಯದಂತೆ ಕೋರ್ಟ್ ಆದೇಶ ನೀಡಿತ್ತು. ಆದರೆ, ಪ್ರಾಧಿಕಾರ ಹಿಂದೆ ಸರಿದಿದ್ದು, ಕಟ್ಟಡವನ್ನು ಧ್ವಂಸಗೊಳಿಸಿದೆ ಎಂದು ವೈಎಸ್ ಆರ್ ಸಿಪಿ ಹೇಳಿದೆ.

ಸಿಆರ್‌ಡಿಎ ಕ್ರಮವು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಒಳಗೊಂಡಿರುವ ಎನ್‌ಡಿಎ ಸರ್ಕಾರದ ಅಡಿಯಲ್ಲಿ ದಕ್ಷಿಣ ರಾಜ್ಯದಲ್ಲಿ ಕಾನೂನು ಮತ್ತು ನ್ಯಾಯ ಸಂಪೂರ್ಣವಾಗಿ ಕಣ್ಮರೆಯಾಗಿದೆ. ಧ್ವಂಸವು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಳ್ವಿಕೆಯನ್ನು ಸೂಚಿಸುತ್ತದೆ. ಈ ಸೇಡಿನ ರಾಜಕಾರಣಕ್ಕೆ ವಿರೋಧ ಪಕ್ಷ ಬೆದರುವುದಿಲ್ಲ. ಪಕ್ಷ ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಜಗನ್ ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ