ಸಾಂದರ್ಭಿಕ ಚಿತ್ರ 
ದೇಶ

ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪ: 18 ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 18 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.

ನವದೆಹಲಿ: ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 18 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.

ಶನಿವಾರ ರಾತ್ರಿ ಡೆಲ್ಫ್ಟ್ ದ್ವೀಪಗಳ ಬಳಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉತ್ತರ ಸಮುದ್ರದಿಂದ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನ್ಯೂಸ್ ಪೋರ್ಟಲ್ ದಿ ನ್ಯೂಸ್ ಫಸ್ಟ್ ವರದಿ ಮಾಡಿದೆ.

ಬಂಧಿತ ಮೀನುಗಾರರನ್ನು ಮುಂದಿನ ಕಾನೂನು ಕ್ರಮಗಳಿಗಾಗಿ ಕಂಕೆಸಂತುರೈ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗುವುದು ಎಂದು ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಗಯಾನ್ ವಿಕ್ರಮಸೂರ್ಯ ತಿಳಿಸಿದ್ದಾರೆ. ಕಳೆದ ವಾರ, ದ್ವೀಪ ರಾಷ್ಟ್ರದ ನೀರಿನಲ್ಲಿ ಬೇಟೆಯಾಡಿದ ಆರೋಪದ ಮೇಲೆ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಅವರ ಟ್ರಾಲರ್ ನ್ನು ಶ್ರೀಲಂಕಾ ನೌಕಾಪಡೆ ವಶಪಡಿಸಿಕೊಂಡಿತ್ತು.

ಇದಕ್ಕೂ ಮುನ್ನಾ ಶ್ರೀಲಂಕಾಕ್ಕೆ ಸೇರಿದ ಜಲಮಾರ್ಗದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇರೆಗೆ 180 ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಅವರ 25 ಟ್ರಾಲರ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಕಳೆದ ವರ್ಷ ಸುಮಾರು 240 ರಿಂದ 245 ಮಂದಿಯನ್ನು ಬಂಧಿಸಲಾಗಿತ್ತು ಎಂದು ಶ್ರೀಲಂಕಾದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!