ಸೇತುವೆ ಕುಸಿತ 
ದೇಶ

ಬಿಹಾರದಲ್ಲಿ ನಿರ್ಮಾಣ ಹಂತದ ಮತ್ತೊಂದು ಸೇತುವೆ ಕುಸಿತ; ವಾರದಲ್ಲಿ ಮೂರನೇ ಘಟನೆ

ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆಗಳ ಕುಸಿತ ಪ್ರಕರಣ ಮುಂದುವರೆದಿದೆ. ಭಾನುವಾರ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆಯೊಂದು ಕುಸಿದು ಬಿದ್ದಿದೆ. ಇದು ಇದೇ ವಾರದೊಳಗೆ ಸಂಭವಿಸಿದ ಮೂರನೇ ಘಟನೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋತಿಹಾರಿ: ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆಗಳ ಕುಸಿತ ಪ್ರಕರಣ ಮುಂದುವರೆದಿದೆ. ಭಾನುವಾರ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆಯೊಂದು ಕುಸಿದು ಬಿದ್ದಿದೆ. ಇದು ಇದೇ ವಾರದೊಳಗೆ ಸಂಭವಿಸಿದ ಮೂರನೇ ಘಟನೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋತಿಹಾರಿಯ ಘೋರಸಹಸ್ ಬ್ಲಾಕ್ ನಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂವಾ ಗ್ರಾಮ ಸೇರಿದಂತೆ ಇತರೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು 1.5ಕೋಟಿ ವೆಚ್ಚದಲ್ಲಿ 16 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗುತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇದು ಗಂಭೀರ ವಿಷಯವಾಗಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಆರ್‌ಡಬ್ಲ್ಯೂಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಸಿಂಗ್ ಹೇಳಿದ್ದಾರೆ.

''ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ವಿವರವಾದ ವರದಿಯನ್ನು ನಿರೀಕ್ಷಿಸಲಾಗಿದೆ,'' ಘಟನೆಗೆ ನಿಖರ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಜೋರ್ವಾಲ್ ಹೇಳಿದ್ದಾರೆ.

ಸೇತುವೆಯ ಕೆಲವು ಪಿಲ್ಲರ್‌ಗಳ ನಿರ್ಮಾಣಕ್ಕೆ ಸ್ಥಳೀಯರ ಒಂದು ಗುಂಪು ಆರಂಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವರದಿಗಳಿವೆ. ಪೊಲೀಸರು ಈ ಬಗ್ಗೆಯೂ ಪರಿಶೀಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್