ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಜಾಮೀನಿಗೆ ತಡೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ನೀಡಿಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದು, ರಜಾಕಾಲದ ಪೀಠ ಅರ್ಜಿಯ ವಿಚಾರಣೆ ಜೂನ್ 26ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ನಿರಾಕರಿಸಿದೆ.

"ದೆಹಲಿ ಹೈಕೋರ್ಟ್ ಆದೇಶವು ಮೊದಲು ದಾಖಲೆಗೆ ಬರಲಿ ಮತ್ತು ಯಾವುದೇ ತಕ್ಷಣದ ಆದೇಶವಿಲ್ಲದೆ ನಾವು ಮುಂದಿನ ವಾರ ಪ್ರಕರಣದ ವಿಚಾರಣೆ ಮುಂದುವರಿಸಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿ, ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆಯನ್ನು ಜೂನ್ 26, ಬುಧವಾರಕ್ಕೆ ಮುಂದೂಡಿತು.

ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್‌ ಅವರಿಗೆ ನೀಡಿದ ಜಾಮೀನನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿಯ ಮೇಲೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಮತ್ತು ತನ್ನ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ತನ್ನ ಆದೇಶವನ್ನು ನಾಳೆ ಅಥವಾ ಬುಧವಾರ ಪ್ರಕಟಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ