ಓಂ ಬಿರ್ಲಾ - ಕೋಡಿಕುನ್ನಿಲ್ ಸುರೇಶ್ 
ದೇಶ

ಲೋಕಸಭೆ ಸ್ಪೀಕರ್ ಚುನಾವಣೆ: ಕಾಂಗ್ರೆಸ್, ಬಿಜೆಪಿಯಿಂದ ಸಂಸದರಿಗೆ ವಿಪ್ ಜಾರಿ

ಲೋಕಸಭೆಯ ಎಲ್ಲಾ ಕಾಂಗ್ರೆಸ್ ಪಕ್ಷದ ಸದಸ್ಯರು ಬೆಳಗ್ಗೆ 11:00 ರಿಂದ ಸದನವನ್ನು ಮುಂದೂಡುವವರೆಗೆ ದಯವಿಟ್ಟು ಸದನದಲ್ಲಿ ಇರುವಂತೆ ವಿನಂತಿಸಲಾಗಿದೆ.

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕಾಂಗ್ರೆಸ್ ಹಾಗೂ ಬಿಜೆಪಿ ತಮ್ಮ ತಮ್ಮ ಸಂಸದರಿಗೆ ಮೂರು ಸಾಲಿನ ವಿಪ್ ಅನ್ನು ಮಂಗಳವಾರ ಜಾರಿ ಮಾಡಿವೆ.

"ನಾಳೆ ಅಂದರೆ ಬುಧವಾರ, ಜೂನ್ 26, 2024 ರಂದು ಲೋಕಸಭೆಯಲ್ಲಿ ಬಹಳ ಮುಖ್ಯವಾದ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು. ಲೋಕಸಭೆಯ ಎಲ್ಲಾ ಕಾಂಗ್ರೆಸ್ ಪಕ್ಷದ ಸದಸ್ಯರು ಬೆಳಗ್ಗೆ 11:00 ರಿಂದ ಸದನವನ್ನು ಮುಂದೂಡುವವರೆಗೆ ದಯವಿಟ್ಟು ಸದನದಲ್ಲಿ ಇರುವಂತೆ ವಿನಂತಿಸಲಾಗಿದೆ.

ಜೂನ್ 26, 2024 ರಂದು ಸದನದಲ್ಲಿ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸಿ ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಕೆ ಸುರೇಶ್ ಅವರು ಸಂಸದರಿಗೆ ವಿಪ್ ಜಾರಿ ಮಾಡಿದ್ದಾರೆ.

ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಎನ್‌ಡಿಎ, ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. ಅವರ ವಿರುದ್ಧ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ತನ್ನ ಅಭ್ಯರ್ಥಿಯಾಗಿ ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಅವರು ಕಣಕ್ಕಿಳಿಸಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ ಇಂದು ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ನಾಳೆ ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ