ಕೆ. ಸುರೇಶ್, ಓಂ ಬಿರ್ಲಾ 
ದೇಶ

ಲೋಕಸಭೆ ಸ್ಪೀಕರ್ ಹುದ್ದೆ: NDA ಅಭ್ಯರ್ಥಿ ಓಂ ಬಿರ್ಲಾ, ಇಂಡಿಯಾ ಬಣದ ಕೆ ಸುರೇಶ್ ನಡುವೆ ಪೈಪೋಟಿ!

18ನೇ ಲೋಕಸಭೆ ಸ್ಪೀಕರ್ ಸ್ಥಾನಕ್ಕಾಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಇಂಡಿಯಾ ಬಣದ ಅಭ್ಯರ್ಥಿ ಕೋಡಿಕುನ್ನಿಲ್ ಸುರೇಶ್ ನಡುವೆ ಪೈಪೋಟಿಯನ್ನು ಕಾಣಬಹುದಾಗಿದೆ.

ನವದೆಹಲಿ: 18ನೇ ಲೋಕಸಭೆ ಸ್ಪೀಕರ್ ಸ್ಥಾನಕ್ಕಾಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಇಂಡಿಯಾ ಬಣದ ಅಭ್ಯರ್ಥಿ ಕೋಡಿಕುನ್ನಿಲ್ ಸುರೇಶ್ ನಡುವೆ ಪೈಪೋಟಿಯನ್ನು ಕಾಣಬಹುದಾಗಿದೆ. ಉಪ ಸ್ಪೀಕರ್ ಸ್ಥಾನವನ್ನು ಬಿಟ್ಟುಕೊಡುವುದಾಗಿ ಎನ್ ಡಿಎ ಭರವಸೆ ನೀಡದ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಸಂಸತ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ನಡೆಯಲಿದೆ.

17ನೇ ಲೋಕಸಭೆಯ ಸ್ಪೀಕರ್ ಆಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎಗೆ ಹೆಚ್ಚಿನ ಸಂಖ್ಯೆಯಿರುವ ಕಾರಣ ಅವರು ಆಯ್ಕೆಯಾಗಲಿದ್ದಾರೆ, ಆದರೆ ಇದಕ್ಕೆ ಪ್ರತಿಪಕ್ಷಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿವೆ. ಬಿರ್ಲಾ ಅವರ ಪ್ರತಿಸ್ಪರ್ಧಿಯಾಗಿರುವ ಕೋಡಿಕುನ್ನಿಲ್ ಸುರೇಶ್, ಕೇರಳದ ಮಾವೆಲಿಕರಾ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿದ್ದಾರೆ. ಪ್ರಸ್ತುತದ ಸದಸ್ಯರಲ್ಲಿ ಅತಿ ಹೆಚ್ಚು ಚುನಾವಣೆಗಳನ್ನು ಗೆದ್ದಿರುವ ಕಾರಣ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಹೆಸರಿಸಬೇಕೆಂದು ಪ್ರತಿಪಕ್ಷಗಳು ಭಾವಿಸಿದ್ದವು. ಆದರೆ, ಎನ್‌ಡಿಎ ಭರ್ತೃಹರಿ ಮಹತಾಬ್ ಪರವಾಗಿ ಮತ ಚಲಾಯಿಸಿದ್ದು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಮೊದಲ ಬಿಕ್ಕಟ್ಟಿಗೆ ಕಾರಣವಾಯಿತು.

1946ರಲ್ಲಿ ಕೇಂದ್ರ ಅಸೆಂಬ್ಲಿಯಲ್ಲಿ ಸ್ಪೀಕರ್ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿ ಕುರಿತು ನಮ್ಮ ಆವೃತ್ತಿಯ ಪ್ರತಿ

''ನಾನು ಸತತವಾಗಿ ಎಂಟು ಬಾರಿ ಲೋಕಸಭೆ ಸದಸ್ಯನಾಗಿರಲಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವರು ವಾದಿಸುತ್ತಾರೆ. ಆದರೆ, ಮಹತಾಬ್ ಆರು ಬಾರಿ ಬಿಜೆಡಿ ಸಂಸದರಾಗಿ ಸೇವೆ ಸಲ್ಲಿಸಿದ್ದು, ಈಗ ಮೊದಲ ಬಾರಿಗೆ ಬಿಜೆಪಿ ಸಂಸದರಾಗಿದ್ದಾರೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರಿದವರು ಹೇಗೆ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲು ಸಾಧ್ಯ? ಇದು ಪ್ರಜಾಸತಾತ್ಮಕ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸುರೇಶ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದರು.

ಮಂಗಳವಾರ ಅಧಿವೇಶನಕ್ಕೂ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ ನಂತರ ಈ ಬೆಳವಣಿಗೆಗಳು ನಡೆದಿವೆ. ಹಿಂದಿನ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಎನ್ ಡಿಎ ನಾಮನಿರ್ದೇಶಿತರಾಗಿ ಲೋಕಸಭೆಗೆ ಮರಳಲು ಸಿದ್ಧತೆ ನಡೆಸುತ್ತಿರುವಾಗಲೇ, ಕಾಂಗ್ರೆಸ್ ಅಸಮಾಧಾನವಿದೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ ನಂತರ ಅವರು ಒಮ್ಮತದ ಅಭ್ಯರ್ಥಿಯಾಗದಿರುವ ಸಾಧ್ಯತೆ ಕಂಡುಬಂದಿತು.

ಕೆ. ಸುರೇಶ್ ಉಮೇದುವಾರಿಕೆ ಸಲ್ಲಿಕೆ

ಸ್ಪೀಕರ್ ಹುದ್ದೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ನೆರವು ಕೋರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ ನಂತರ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ಟೀಕಿಸಿದರು. ಸೋಮವಾರ ಸಂಜೆ ಖರ್ಗೆ ಅವರು ರಾಜನಾಥ್ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ಉಪಸಭಾಪತಿ ಸ್ಥಾನದ ಭರವಸೆ ಪಡೆಯಲು ಉತ್ಸುಕರಾಗಿದ್ದರು. ಆದರೆ ನಂತರ ನಿರಾಕರಣೆ ಬಂದಿದೆ ಎಂದು ವರದಿಯಾಗಿದೆ. ಪ್ರತಿಪಕ್ಷಗಳು ಮತ್ತು ರಾಹುಲ್ ಮಂಗಳವಾರ ಮತ್ತೊಮ್ಮೆ ತಮ್ಮ ಬೇಡಿಕೆಯನ್ನು ಮಂಡಿಸಿದ್ದಾರೆ.

"ಪ್ರಧಾನಿ ಮೋದಿಯವರ ಮಾತಿನಲ್ಲಿ ಯಾವುದೇ ಅರ್ಥವಿಲ್ಲ ಎಂದು ನಮಗೆಲ್ಲರಿಗೂ ತಿಳಿದಿದೆ. ಅವರು ಸಹಕಾರ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತನಾಡುತ್ತಾರೆ, ಆದರೆ ವಾಸ್ತವವಾಗಿ ಆಗುತ್ತಿರುವುದು ಬೇರೆಯೇ ಆಗಿದೆ. ನಮ್ಮ ನಾಯಕ ಖರ್ಗೆ ಅವರ ಮಾತಿಗೆ ಮನ್ನಣೆ ಸಿಕ್ಕಿಲ್ಲ ಎಂದು ರಾಹುಲ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರದ ಪರವಾಗಿ ಮಾತನಾಡಿದ ಪಿಯೂಷ್ ಗೋಯಲ್, ಸ್ಪೀಕರ್ ಮತ್ತು ಡೆಪ್ಯೂಟಿ ಸ್ಪೀಕರ್ ಇಡೀ ಸದನವನ್ನು ಪ್ರತಿನಿಧಿಸುತ್ತಾರೆ. ಡೆಪ್ಯುಟಿ ಸ್ಪೀಕರ್ ನಿರ್ದಿಷ್ಟ ಪಕ್ಷದವರೆಂದು ಒತ್ತಾಯಿಸುವುದು ಯಾವುದೇ ಸಂಪ್ರದಾಯವಲ್ಲಾ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT