ಅರವಿಂದ್ ಕೇಜ್ರಿವಾಲ್ TNIE
ದೇಶ

ಕೇಜ್ರಿವಾಲ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್; ದೆಹಲಿ ಸಿಎಂಗೆ ಜೈಲೇ ಗತಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.

ಜಸ್ಟಿಸ್ ಸುಧೀರ್ ಕುಮಾರ್ ಜೈನ್ ಅವರ ಪೀಠ, ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದೆ.

ಟ್ರಯಲ್ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ನೀಡಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ