ಸಿಎಂ ಸ್ಟಾಲಿನ್ 
ದೇಶ

ಸರ್ಕಾರದಲ್ಲಿ ಖಾಲಿ ಇರುವ 75 ಸಾವಿರ ಹುದ್ದೆಗಳು ಜನವರಿ 2026 ರೊಳಗೆ ಭರ್ತಿ: ತಮಿಳುನಾಡು ಸಿಎಂ

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಚೆನ್ನೈ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 75,000 ಹುದ್ದೆಗಳನ್ನು ಜನವರಿ 2026 ರೊಳಗೆ ಭರ್ತಿ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಹೇಳಿಕೆ ನೀಡಿದ ಸಿಎಂ ಸ್ಟಾಲಿನ್, ಇನ್ನು 18 ತಿಂಗಳೊಳಗೆ ಅಂದರೆ 2026ರ ಜನವರಿ ವೇಳೆಗೆ ತಮಿಳುನಾಡು ಲೋಕಸೇವಾ ಆಯೋಗದ ಮೂಲಕ 17,595 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ತಮಿಳುನಾಡು ಶಿಕ್ಷಕರ ನೇಮಕಾತಿ ಮಂಡಳಿಯ ಮೂಲಕ 19,260 ಶಿಕ್ಷಕರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಅದೇ ರೀತಿ 3,041 ಹುದ್ದೆಗಳನ್ನು ವೈದ್ಯಕೀಯ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಮತ್ತು 6,688 ಹುದ್ದೆಗಳನ್ನು ತಮಿಳುನಾಡು ಏಕರೂಪ ಸೇವೆಗಳ ನೇಮಕಾತಿ ಮಂಡಳಿಯ ಮೂಲಕ ಭರ್ತಿ ಮಾಡಲಾಗುವುದು. ಅಲ್ಲದೆ, ಸಮಾಜ ಕಲ್ಯಾಣ ಮತ್ತು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಗಳಲ್ಲಿ ಖಾಲಿ ಇರುವ 30,219 ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು ಎಂದು ಸ್ಟಾಲಿನ್ ಹೇಳಿದರು.

ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಗುಣಮಟ್ಟದ ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣವನ್ನು ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ತಮಿಳುನಾಡು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ ಅವರು, ಶಿಕ್ಷಣದ ಮೂಲಕ ನಾವು ಬೌದ್ಧಿಕ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

2021 ರಲ್ಲಿ ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 32,774 ಖಾಲಿ ಹುದ್ದೆಗಳನ್ನು ವಿವಿಧ ನೇಮಕಾತಿ ಏಜೆನ್ಸಿಗಳ ಮೂಲಕ ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 65,483 ಯುವಕರು ಸರ್ಕಾರಿ ಸೇವೆಗೆ ಸೇರಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT